
ಬೆಂಗಳೂರು,ಸೆ.3- ಪ್ರವಾಹ ಪರಿಸ್ಥಿತಿ ನಿರ್ವಹಣೆಗಾಗಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕು. ಒಂದು ವೇಳೆ ಇದರ ದುರುಪಯೋಗವಾದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರವಾಹ ಪರಿಹಾರ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಿದೆ ಪರಿಹಾರ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಹಗಲಿರುಳು ಶ್ರಮಿಸಿದ್ದಾರೆ.ಈಗಾಗಲೇ ಪರಿಸ್ಥಿತಿ ನಿರ್ವಹಣೆಗೆ ಬಿಡುಗಡೆ ಮಾಡಿರುವ ಹಣ ದುರುಪಯೋಗವಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಕೇಂದ್ರ ಸರ್ಕಾರ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಮೊದಲ ಕಂತಿನ ನೆರವನ್ನು ಶೀಘ್ರದಲ್ಲಿ ಬಿಡಗಡೆ ಮಾಡಲಿದೆ.ಇದೇ 7ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಪರಿಹಾರ ಬಿಡುಗಡೆಗೆ ಮನವಿ ಮಾಡಲಾಗುವುದು ಎಂದು ಹೇಳಿದರು.