ಬೆಂಗಳೂರು, ಸೆ.3-ಟೆಲಿಪೋನ್ ಕದ್ದಾಲಿಕೆ ಪ್ರಕರಣ ಸಂಬಂಧ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸಿಬಿಐನ ತನಿಖಾ ತಂಡ ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಭೇಟಿ ಮಾಡಿ ಮಾಹಿತಿಪಡೆದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರನ್ನು ವಸಂತನಗರದಲ್ಲಿರುವ ನಿವಾಸದಲ್ಲಿ ಭೇಟಿಯಾದ ಸಿಬಿಐ ತಂಡ ಪರಸ್ಪರ ಮಾಹಿತಿಗಳನ್ನು ವಿನಿಮಯ ಮಾಡಿಕೊಂಡರು.
ಈ ಹಿಂದೆಯೂ ಇದೇ ತಂಡ ವಿಜಯ್ಭಾಸ್ಕರ್ ಅವರನ್ನು ಭೇಟಿಯಾಗಿತ್ತು.ಇದೀಗ ಎರಡನೇ ಬಾರಿ ಭೇಟಿಯಾಗಿರುವುದು ಮಹತ್ವ ಪಡೆದುಕೊಂಡಿದೆ.
ಮೂಲಗಳ ಪ್ರಕಾರ ರಾಜ್ಯಸರ್ಕಾರದ ಗೃಹ ಕಾರ್ಯದರ್ಶಿಯನ್ನು ತನಿಖೆಗೆ ಒಳಪಡಿಸುವ ಸಂಬಂಧ ಮುಖ್ಯ ಕಾರ್ಯದರ್ಶಿಯನ್ನು ಭೇಟಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಗೃಹ ಕಾರ್ಯದರ್ಶಿಯವರ ಸೂಚನೆ ಮೇರೆಗೆ ಟೆಲಿಪೋನ್ ಕದ್ದಾಲಿಕೆ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಅವರನ್ನು ತನಿಖೆಗೆ ಒಳಪಡಿಸಲು ಮುಂದಾಗಿದ್ದಾರೆ.
ನಿನ್ನೆಯಷ್ಟೆ ಈ ಪ್ರಕರಣದಲ್ಲಿ ಕೇಳಿ ಬಂದಿದ್ದ ಮೂವರು ಇನ್ಸ್ಪೆಕ್ಟರ್ಗಳನ್ನು ತನಿಖೆಗೆ ಒಳಪಡಿಸಿ ಮಾಹಿತಿಯನ್ನು ಪಡೆಯಲಾಗಿತ್ತು.