ಡಿ.ಕೆ.ಶಿವಕುಮಾರ್ ಭೇಟಿಗೆ ನಿರಾಕರಣೆ

ಬೆಂಗಳೂರು,ಸೆ.4-ನವದೆಹಲಿಯ ರಾಮಮನೋಹರ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಲು ಅವಕಾಶ ನಿರಾಕರಿಸಿದ್ದಾರೆ.

ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಲು ಸಂಸದರೂ ಆಗಿರುವ ವೇಣುಗೋಪಾಲ್ ಅವರು ಆಗಮಿಸಿದ್ದರು. ಆದರೆ ಆಸ್ಪತ್ರೆಯ ಮುಂಭಾಗದಲ್ಲೇ ಅವಕಾಶ ನಿರಾಕರಿಸಿದರು.

ಈ ಸಂದರ್ಭದಲ್ಲಿ ಸಂಸದರಾ ಡಿ.ಕೆ.ಸುರೇಶ್, ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ, ಆರ್.ಧ್ರುವನಾರಾಯಣ್,ವಿಧಾನಪರಿಷತ್ ಸದಸ್ಯ ರವಿ ಸೇರಿದಂತೆ ಹಲವಾರು ಮಂದಿ ಕಾಂಗ್ರೆಸ್ ನಾಯಕರು ಹಾಜರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ