ಭಾರತವನ್ನು ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆಯಿಂದ ಖಡಕ್ ಎಚ್ಚರಿಕೆ

ನವದೆಹಲಿ, ಸೆ.5-ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ ಪ್ರಚೋದನಾಕಾರಿ ದಾಳಿ ನಡೆಸುವ ಜತೆಗೆ, ಅಣ್ವಸ್ತ್ರ ಪ್ರಯೋಗದ ಕುರಿತು ಪ್ರಸ್ತಾಪಿಸುವ ಮೂಲಕ ಭಾರತವನ್ನು ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಖಡಕ್ ಎಚ್ಚರಿಕೆ ರವಾನಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿನ ಕೃತ್ಯಗಳನ್ನು ನಿಲ್ಲಿಸದೇ ಹೋದಲ್ಲಿ ಪಾಕ್ ಜನ್ಮಜನ್ಮದಲ್ಲೂ ನೆನಸಿಕೊಳ್ಳುವಂತಹ ಏಟು ನೀಡುತ್ತೇವೆ. ಉದ್ಘಟತನ ಮುಂದುವರೆದರೆ ಆ ದೇಶವನ್ನೇ ಬಲಿ ಹಾಕುವಂತಹ ಕೆಲಸ ಮಾಡಬೇಕಾಗುತ್ತದೆ ಎಂದು ಸೇನೆ ಎಚ್ಚರಿಕೆ ನೀಡಿದೆ.

ಕಾಶ್ಮೀರ ವಿಚಾರವಾಗಿ ಪದೇ ಪದೇ ಭಾರತವನ್ನು ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಖಡಕ್ ಎಚ್ಚರಿಕೆ ನೀಡಿದ್ದು, 1971ರ ಯುದ್ಧ ಸೋಲನ್ನೂ ಮರೆತು ಬಿಡಬೇಕು, ಅಂತಹ ದೊಡ್ಡ ಏಟು ನೀಡುತ್ತೇವೆ ಎಂದು ಚಿನಾರ್ ಕಾಪ್ರ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಕೆಜೆಎಸ್ ಧಿಲ್ಲೋನ್ ಗಂಭೀರ ಎಚ್ಚರಿಕೆ ನೀಡಿದ್ದಾರೆ.

ಪಾಕಿಸ್ತಾನ 1971ರ ಯುದ್ಧವನ್ನು ಮರೆತಿರುವಂತಿದೆ. ಈ ಯುದ್ಧದಲ್ಲಿ ಪಾಕಿಸ್ತಾನದ ಹಿಡಿತದಿಂದ ಬಾಂಗ್ಲಾದೇಶ ಸ್ವತಂತ್ರಗೊಂಡಿತ್ತು. 93,000ಕ್ಕೂ ಅಧಿಕ ಪಾಕ್ ಸೈನಿಕರು ಭಾರತದ ಸೇನೆಗೆ ಶರಣಾಗಿದ್ದರು. ಈ ಹೊಡೆತ ತಿಂದ ಬಳಿಕವೂ ನೆರೆಯ ದೇಶ ಇನ್ನೂ ಪಾಠ ಕಲಿತಿಲ್ಲ. ಆದರೆ ನಾನು ಒಂದು ಹೇಳುತ್ತೇನೆ.

ಪಾಕಿಸ್ತಾನ ತನ್ನ ಕೃತ್ಯ ಮುಂದುವರೆಸಿದರೆ, 1971ರ ಯುದ್ಧ ಸೋಲನ್ನೂ ಮರೆತು ಬಿಡಬೇಕು, ಅಂತಹ ದೊಡ್ಡ ಏಟು ನೀಡುತ್ತೇವೆ ಎಂದು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ