ಬಲೂಚಿಸ್ತಾನ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ-ದಾಳಿಯಲ್ಲಿ ಓರ್ವ ಮಹಿಳೆ ಸೇರಿದಂತೆ 6 ಉಗ್ರಗಾಮಿಗಳ ಹತ್ಯೆ

ಕರಾಚಿ, ಸೆ.4- ಪಾಕಿಸ್ತಾನದ ಹಿಂಸಾಚಾರ ಪೀಡಿತ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಮಹಿಳೆ ಸೇರಿದಂತೆ 6 ಉಗ್ರಗಾಮಿಗಳು ಹತರಾಗಿದ್ದಾರೆ.

ಮೃತಪಟ್ಟ ಉಗ್ರಗಾಮಿಗಳಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಲೂಚಿಸ್ತಾನ ಪ್ರಾಂತ್ಯದ ರಾಜಧಾನಿ ಫೆಟ್ಟಾದ ಈಸ್ರ್ಟನ್ ಬೈಪಾಸ್ ಪ್ರದೇಶದಲ್ಲಿ ಇಂದು ಮುಂಜಾನೆ ಈ ಎನ್‍ಕೌಂಟರ್ ನಡೆಯಿತು. ಈ ಗುಂಡಿನ ಚಕಮಕಿಯಲ್ಲಿ ಭಯೋತ್ಪಾದನಾ ನಿಗ್ರಹದಳದ ಪೊಲೀಸರಿಗೂ ಗಾಯಗಳಾಗಿವೆ.

ಗುಂಡಿನ ಕಾಳಗದ ವೇಳೆ ಉಗ್ರಗಾಮಿ ಬಣದ ಮಹಿಳೆಯೊಬ್ಬಳು ತನ್ನನ್ನು ತಾನು ಸ್ಫೋಟಿಸಿಕೊಂಡ ಪರಿಣಾಮ ಕೆಲ ಪೊಲೀಸರಿಗೆ ಗಾಯಗಳಾಗಿವೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ