
ನವದೆಹಲಿ, ಸೆ.6- ಆಮ್ ಆದ್ಮಿ ಪಾರ್ಟಿ(ಎಎಪಿ) ಪ್ರಭಾವಿ ನಾಯಕಿ ಮತ್ತು ಶಾಸಕಿ ಅಲ್ಕಾ ಲಂಬಾ ಪಕ್ಷಕ್ಕೆ ಗುಡ್‍ಬೈ ಹೇಳಿದ್ದಾರೆ.
ತಮ್ಮ ಪಕ್ಷದ ಶಾಸಕರು ಹಾಗೂ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ನಡೆ ವಿರುದ್ಧ ಅಸಮಾಧಾನ ಹೊಂದಿ, ಲೋಕಸಭಾ ಚುನಾವಣೆ ವೇಳೆ ಪ್ರಚಾರದಿಂದಲೂ ದೂರ ಉಳಿದಿದ್ದ ಚಾಂದಿನಿ ಚೌಕ್ ಶಾಸಕಿ ಅಲ್ಕಾ ಲಂಬಾ ಅವರು ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತಂತೆ ಸ್ವತಃ ಅಲ್ಕಾ ಲಂಬಾ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ, ವಿದಾಯ ಹೇಳುವ ಸಮಯ ಬಂದಿದೆ. ಗುಡ್ ಬೈ ಟು ಆಪ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಕಳೆದ 6 ವರ್ಷಗಳ ಪ್ರಯಾಣ ಅತ್ಯುತ್ತಮ ಪಾಠವಾಗಿದೆ. ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.