![Varta Mitra News Varta Mitra News](http://kannada.vartamitra.com/wp-content/themes/mh-magazine/images/placeholder-content-news.png)
ಬೆಂಗಳೂರು, ಸೆ.7-ಅಂತರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಕ್ಕಳಿಗೆ ಮತ್ತು ಮಹಿಳೆಯರಿಗೆ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘದ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅಕ್ಟೋಬರ್ ಆರರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಉಮೇಶ್ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮಹಿಳೆಯರನ್ನ ಮತ್ತು ಮಕ್ಕಳನ್ನ ಗುರುತಿಸಿ ಅವರಿಗೆ ಪೆÇ್ರೀ ನಿಟ್ಟಿನಲ್ಲಿ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಈಗಾಗಲೇ ಬೇರೆ ರಾಜ್ಯಗಳಿಂದ 14 ಜನ ನಮ್ಮ ರಾಜ್ಯದಿಂದ 11 ಜನರನ್ನು ನೋಂದಣಿ ಮಾಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸಮಾರಂಭವನ್ನ ಸ್ವತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಉದ್ಘಾಟಿಸಲಿದ್ದಾರೆ. ಸಾಲುಮರದ ತಿಮ್ಮಕ್ಕ, ನಟ ರಾಘವೇಂದ್ರ ರಾಜ್ಕುಮಾರ್, ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್, ಸಚಿವೆ ಶಶಿಕಲಾ ಜೊಲ್ಲೆ ಸೇರಿದಂತೆ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.