ಮಾಜಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ತನಿಖೆಯಾಗಬೇಕು-ಇಡಿಗೆ ದೂರು ನೀಡಿದ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣ ರೆಡ್ಡಿ

ಬೆಂಗಳೂರು, ಸೆ.6- ಮಾಜಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣ ರೆಡ್ಡಿ ಅವರು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ.

ಕೇರಳದಿಂದ ನಮ್ಮ ರಾಜ್ಯಕ್ಕೆ ಬರಿಗೈಲಿ ಬಂದ ಕೆ.ಜೆ.ಜಾರ್ಜ್ ಸಾವಿರಾರು ಕೋಟಿ ವ್ಯವಹಾರ ಮಾಡುತ್ತಿದ್ದಾರೆ. ಅಷ್ಟೊಂದು ಹಣ ಹೇಗೆ ಬರಲು ಸಾಧ್ಯ. ವಿದೇಶಗಳಲ್ಲಿ ಅಪಾರ ಆಸ್ತಿ ಹೊಂದಿದ್ದಾರೆ. ಇದೆಲ್ಲದರ ಬಗ್ಗೆ ತನಿಖೆ ಮಾಡಬೇಕೆಂದು ರವಿಕೃಷ್ಣ ರೆಡ್ಡಿ ಮನವಿ ಮಾಡಿದ್ದಾರೆ.

ದಾಖಲೆ ಸಮೇತ ದೂರು ಸಲ್ಲಿಸಿರುವ ಅವರು, ಅಮೆರಿಕಾ, ಆಸ್ಟ್ರೇಲಿಯಾದಲ್ಲಿ ಆಸ್ತಿಯಿದೆ ಎಂದು ಲೋಕಾಯುಕ್ತಕ್ಕೆ ಅಫಿಡವಿಟ್ ನೀಡಿದ್ದಾರೆ. ಅದು ಹೇಗೆ ಇಷ್ಟೆಲ್ಲ ಆಸ್ತಿ ಸಂಪಾದನೆ ಮಾಡಿದ್ದಾರೆ? ಮಗಳು-ಅಳಿಯನ ಹೆಸರಿನಲ್ಲಿ ಕೆ.ಜೆ.ಜಾರ್ಜ್ ವಿದೇಶಗಳಲ್ಲಿ ಆಸ್ತಿ ಸಂಪಾದನೆ ಮಾಡಿದ್ದಾರೆ. ಇದರ ಬಗ್ಗೆ ತನಿಖೆಯಾಗಬೇಕೆಂದು ರವಿಕೃಷ್ಣ ರೆಡ್ಡಿ ಕೋರಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ