ಪಿಎಚ್‍ಡಿ ಪದವಿ ಪಡೆದ ಸಹಾಯಕ ಯೋಜನಾಧಿಕಾರಿ ಸವಿತಾ ವೈ.ಡಿ.

ಬೆಂಗಳೂರು, ಸೆ.7- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ಯೋಜನಾಧಿಕಾರಿ ಸವಿತಾ ವೈ.ಡಿ. ಅವರು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಿಂದ ಪಿಎಚ್‍ಡಿ ಪದವಿ ಪಡೆದಿದ್ದಾರೆ.

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ಎಸ್.ಎ.ಖಾಜಿ ಅವರ ಮಾರ್ಗದರ್ಶನದಲ್ಲಿ ಸವಿತಾ ಅವರು ಎ ಸ್ಟಡಿ ಆನ್ ಡೊಮೆಸ್ಟಿಕ್ ವಯಲೆನ್ಸ್ ಅಂಡ್ ಇಟ್ಸ್ ಇಂಪ್ಯಾಕ್ಟ್ ಆನ್ ಉಮೆನ್ -ಮೈಸೂರು ಜಿಲ್ಲಾ ನ್ಯಾಯಾಲಯ ಸೀಮಿತ ಎಂಬ ವಿಷಯದ ಕುರಿತು ಪ್ರಬಂಧವನ್ನು ಮಂಡಿಸಿದ್ದರು.

ವಿವಿಯ 10ನೇ ಘಟಿಕೋತ್ಸವದಲ್ಲಿ ಸವಿತಾ ಪಿಎಚ್‍ಡಿ ಪದವಿ ಸ್ವೀಕರಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ