
ಬೆಂಗಳೂರು: ಚಂದ್ರಯಾನ್ -2 ರ ವಿಕ್ರಮ್ ಲ್ಯಾಂಡರ್ ಜೊತೆಗಿನ ಸಂಪರ್ಕವನ್ನು ಇಸ್ರೋ ಕಳೆದುಕೊಂಡ ನಂತರ ಶನಿವಾರ ಬೆಳಿಗ್ಗೆ 8 ಗಂಟೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಿಯಂತ್ರಣ ಕೇಂದ್ರದಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ನಮ್ಮ ವಿಜ್ಞಾನಿಗಳ ಸಾಧನೆ ಬಗ್ಗೆ ನಮಗೆ ಹೆಮ್ಮೆ ಇದೆ, ಭಾರತ ನಿಮ್ಮೊಂದಿಗಿದೆ ಎಂದು ಹೆಮ್ಮೆಯಿಂದ ನುಡಿದರು. ನಿಮ್ಮ ಪರಿಶ್ರಮದ ಬಗ್ಗೆ ಭಾರತೀಯರೆಲ್ಲರಿಗೂ ಹೆಮ್ಮೆ ಇದೆ. ಅಡೆತಡೆಗಳಿಂದ ನಿಮ್ಮ ವಿಶ್ವಾಸ ಕುಗ್ಗಿಲ್ಲ, ಹೆಚ್ಚಾಗಿದೆ ಎಂದು ಇಸ್ರೋ ವಿಜ್ಞಾನಿಗಳನ್ನು ಮೋದಿ ಶ್ಲಾಘಿಸಿದರು.