ಕನ್ನಡಿಗರ ಹೋರಾಟಕ್ಕೆ ಮಣಿದ ಕೇಂದ್ರ; ಹಿಂದಿ-ಇಂಗ್ಲೀಷ್​​​ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲೂ ಬ್ಯಾಂಕಿಗ್​ ಪರೀಕ್ಷೆ

ಬೆಂಗಳೂರು: ಕನ್ನಡಿಗರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರವೀಗ ಹಿಂದಿಇಂಗ್ಲೀಷ್ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲೂ ಬ್ಯಾಂಕಿಗ್​​ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವುದಾಗಿ ಸ್ಪಷ್ಟನೆ ನೀಡಿದೆ. ಮುನ್ನ ಗುರುವಾರ ರಾಷ್ಟ್ರೀಕೃತ ಬ್ಯಾಂಕ್ಗಳ ಕ್ಲರ್ಕ್ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿದ್ದ ಐಬಿಪಿಎಸ್​​ ಸಂಸ್ಥೆ, ಅಭ್ಯರ್ಥಿಗಳಿಗೆ ಹಿಂದಿ ಮತ್ತು ಇಂಗ್ಲೀಷ್ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿತ್ತು. ಇದನ್ನು ಖಂಡಿಸಿ ಐಬಿಪಿಎಸ್​​ ಮೋಸ ಎಂದು ಕನ್ನಡಿಗರು ಟ್ವಿಟರ್​​ ಅಭಿಯಾನ ನಡೆಸಲಾಯ್ತು. ಮೂಲಕ ಅಭ್ಯರ್ಥಿಗಳಿಗೆ ಸ್ಥಳೀಯ ಭಾಷೆಯಲ್ಲಿ ಬ್ಯಾಂಕಿಗ್​​ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಕನ್ನಡಿಗರ ಹೋರಾಟದ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಸರ್ಕಾರಐಬಿಪಿಎಸ್ಸೂಚನೆಯನ್ನು ನವೀಕರಿಸಿ ಹಿಂದಿಇಂಗ್ಲಿಷ್ಜೊತೆಗೆ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನೀಡುವುದಾಗಿ ತಿಳಿಸಿದೆ.

ಇನ್ನು ಸಿಆರ್‌ಪಿ ಆರ್‌ಆರ್‌ಬಿ ಆನ್‌ಲೈನ್‌ ಮುಖ್ಯ ಪರೀಕ್ಷೆ ನವೀಕರಿಸಿದ ಅಧಿಸೂಚನೆಯನ್ನು ಸೆಪ್ಟಂಬರ್‌ 16ಕ್ಕೆ ಬಿಡುಗಡೆ ಮಾಡಲಾಗುವುದು. ಆಫೀಸರ್‌ ಸ್ಕೇಲ್‌ 1 ಮತ್ತು ಆಫೀಸ್‌ ಅಸಿಸ್ಟೆಂಟ್‌ ಹುದ್ದೆಗಾಗಿ ನಡೆಸುತ್ತಿರುವ ಈ ಪರೀಕ್ಷೆ ಬರೆಯಲು ಅಭ್ಯರ್ಥಿಗಳ ರಾಜ್ಯಕ್ಕೆ ಅನುಗುಣವಾಗಿ ಪ್ರಾದೇಶಿಕ ಭಾಷೆಯಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವಾಲಯ ಟ್ವೀಟ್​​ ಮಾಡಿದೆ

ಬ್ಯಾಂಕಿಗ್​​ ಪರೀಕ್ಷೆಗೆ ಕೇವಲ ಇಂಗ್ಲೀಷ್​​ ಮತ್ತು ಹಿಂದಿಯಲ್ಲಿ ಮಾತ್ರ ಮಾಡಿಕೊಟ್ಟಿದ್ದ ಕೇಂದ್ರ ಸರ್ಕಾರದ ವಿರುದ್ಧ ಕನ್ನಡಿಗರು ನಿನ್ನೆಯಿಂದಲೇ ಹೋರಾಟಕ್ಕಿಳಿದಿದ್ದರು. ಟ್ವಿಟ್ಟರ್​ನಲ್ಲಿ ‘ಐಬಿಪಿಎಸ್​ ಮೋಸ’ ಎಂಬ ಹ್ಯಾಶ್​ಟ್ಯಾಗ್​ನೊಂದಿಗೆ ಕನ್ನಡಿಗರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್​ಗಳನ್ನು ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಕನ್ನಡ ನಾಡು-ನುಡಿ ಬಗೆಗಿನ ಮಲತಾಯಿ ಧೋರಣೆಯಿಂದ ಕೇಂದ್ರ ಸರ್ಕಾರ ಕನ್ನಡಿಗರ ಆತ್ಮಾಭಿಮಾನವನ್ನು ಕೆಣಕುತ್ತಿದೆ. ಹಿಂದಿ ಹೇರಿಕೆ, ನಾಡ ಧ್ವಜಕ್ಕೆ ಅಡ್ಡಗಾಲು, ನೆರೆಪರಿಹಾರದಲ್ಲಿ‌ ನಿರ್ಲಕ್ಷ್ಯ… ಹೀಗೆ ಕರ್ನಾಟಕದ ಕೂಗಿಗೆ ಬೆಲೆಯೇ ಇಲ್ಲದಂತಾಗಿದೆ. ಕನ್ನಡಿಗರ ಔದಾರ್ಯ ಮತ್ತು ಹೃದಯವಂತಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎಂದು ಟ್ವೀಟ್ ಮಾಡಿದ್ದರು.

ಕರ್ನಾಟಕ ರಾಜ್ಯದಿಂದ 25 ಸಂಸದರು ಆಯ್ಕೆಯಾಗಿದ್ದಾರೆ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯದೇ ಸರ್ಕಾರವಿದೆ. ಹೀಗಿದ್ದರೂ ಐಬಿಪಿಎಸ್ ಪರೀಕ್ಷೆಯಲ್ಲಿ ರಾಜ್ಯದ ಪರೀಕ್ಷಾರ್ಥಿಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಕೊಡಲಾಗದಿರುವುದು ಕನ್ನಡಿಗರಿಗೆ ಬಗೆದ ದ್ರೋಹ. ಕನ್ನಡಿಗರು ಇದನ್ನು ಸಹಿಸರು ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದರು.
ಹಾಗೆಯೇ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಕನ್ನಡಿಗರು ಅನೇಕ ಬಾರಿ ಬೇಡಿಕೆಯನ್ನಿಟ್ಟರೂ ಕೇಂದ್ರ ಸರ್ಕಾರ ಐಬಿಪಿಎಸ್​ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ. ಇದರ ಜೊತೆಗೆ ಮೊದಲು ಇದ್ದ ಪ್ರಾದೇಶಿಕ ಆದ್ಯತೆಯ ನಿಯಮವನ್ನು ವಾಪಾಸ್​ ತಂದಿಲ್ಲ. ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಗೆ ಇದು ಸಾಕ್ಷಿ. ಇದನ್ನು ನಾನು ಖಡಾಖಂಡಿತವಾಗಿ ವಿರೋಧಿಸುತ್ತೇನೆ ಎಂದಿದ್ದರು.

 

 

 

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ