ಚಿತ್ತೂರು ಬಳಿ ಕಾರಿಗೆ ಬೆಂಕಿ; ಒಂದೇ ಕುಟುಂಬದ 6 ಮಂದಿ ಸಜೀವ ದಹನ

ಹೈದರಾಬಾದ್ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕಾರಿಗೆ ಬೆಂಕಿ ಬಿದ್ದು, ಒಂದೇ ಕುಟುಂಬದ 6 ಮಂದಿ ಸಜೀವ ದಹನಗೊಂಡಿರುವ ದಾರುಣ ಘಟನೆ ನಡೆದಿದೆ.
ಈ ಘಟನೆ ಚಿತ್ತೂರು ಜಿಲ್ಲೆಯ ಸಮೀಪ ನಡೆದಿದೆ. ಇಬ್ಬರು ಮಕ್ಕಳು ಸೇರಿ 6 ಮಂದಿ ಸಾವನ್ನಪ್ಪಿದ್ದಾರೆ. ಮೃತರನ್ನು ಜಾಹ್ನವಿ, ಕಲಾ, ಭಾನುತೇಜ, ಪಾವನಾ ರಾಮ್, ಸಾಯಿ ಅಶಿತಾ, ವಿಷ್ಣು  ಎಂದು  ಗುರುತಿಸಲಾಗಿದೆ. ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ. ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ