ಸಂಪರ್ಕ ಭಾಷೆಯಾಗಿ ಹಿಂದಿ ಕಲಿಸಲು ಪ್ರೋತ್ಸಾಹ-ಸಚಿವ ಜಗದೀಶ್ ಶೆಟ್ಟರ್

ಹುಬ್ಬಳ್ಳಿ, ಸೆ.15- ಕೇಂದ್ರ ಸರ್ಕಾರ ಹಿಂದಿ ಭಾಷೆ ಹೇರಿಕೆ ಮಾಡುತ್ತಿಲ್ಲ. ಒಂದು ಸಂಪರ್ಕ ಭಾಷೆಯಾಗಿ ಹಿಂದಿ ಕಲಿಸಲು ಪ್ರೋತ್ಸಾಹ ಎಂದು ಸಚಿವ ಜಗದೀಶ್ ಶೆಟ್ಟರ್ ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ದೇಶಕ್ಕೆ ಒಂದು ಭಾಷೆ ಇರಬೇಕು. ಈ ದಿಸೆಯಲ್ಲಿ ಒಂದು ದೇಶ, ಒಂದು ಭಾಷೆ ಎಂಬ ನಿಟ್ಟಿನಲ್ಲಿ ಹಿಂದಿ ಕಲಿತರೆ ತಪ್ಪಲ್ಲ ಎಂದು ಹೇಳಿದರು.

ಇನ್ನು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನ್ನಡವನ್ನು ಕಡೆಗಣಿಸಲಾಗಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗಿದೆ. ನಿರ್ಧಾರ ಜಾರಿಗೆ ಬರಲು ಸ್ವಲ್ಪ ಸಮಯವಾಗುತ್ತದೆ ಎಂದು ತಿಳಿಸಿದರು.

ಉಪಮುಖ್ಯಮಂತ್ರಿ ಲಕ್ಷ್ಮಣಸವದಿ ತಮ್ಮ ಇಲಾಖೆಯ ಕುರಿತು ಚರ್ಚಿಸಲು ದೆಹಲಿಗೆ ಹೋಗಿದ್ದಾರೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಸರಿಯಲ್ಲ. ಜೆಡಿಎಸ್‍ನ ಅತೃಪ್ತ ಶಾಸಕರು ನಮ್ಮ ಸಂಪರ್ಕದಲ್ಲಿ ಇಲ್ಲ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ