ಜನವರಿ ತಿಂಗಳ ಅಂತ್ಯಕ್ಕೆ ಅನ್ವಯವಾಗುವಂತೆ ಚುನಾವಣೆ ನಡೆಸಲು ಕ್ರಮ-ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದ ಕಾರ್ಯದರ್ಶಿಗಳು

ಬೆಂಗಳೂರು, ಸೆ.17-ಕಾಂಗ್ರೆಸ್-ಜೆಡಿಎಸ್‍ನಿಂದ ಅನರ್ಹಗೊಂಡಿರುವ ಮಾಜಿ ಶಾಸಕರ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ನಡೆಯುತ್ತಿರುವ ಸಂದರ್ಭದಲ್ಲೇ ವಿಧಾನಸಭೆಯ ಕಾರ್ಯದರ್ಶಿ ತೆರವಾಗಿರುವ ಸ್ಥಾನಗಳಿಗೆ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿಯವರು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಕರ್ನಾಟಕದಲ್ಲಿ 17 ವಿಧಾನಸಭಾ ಕ್ಷೇತ್ರಗಳ ಸ್ಥಾನಗಳು ಖಾಲಿ ಇದ್ದು, ಜನವರಿ ತಿಂಗಳ ಅಂತ್ಯಕ್ಕೆ ಅನ್ವಯವಾಗುವಂತೆ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಬೇಕೆಂದು ಆಯೋಗಕ್ಕೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.

ಜು.25 ರಂದು 17 ಶಾಸಕರನ್ನು ಕರ್ನಾಟಕ ವಿಧಾನಸಭೆ ಸ್ಪೀಕರ್ ಅನರ್ಹಗೊಳಿಸಿದ್ದಾರೆ. ತೆರವಾಗಿರುವ ಈ ಸ್ಥಾನಗಳಿಗೆ ಚುನಾವಣಾ ನಿಯಮದಂತೆ ಆರು ತಿಂಗಳೊಳಗೆ ಚುನಾವಣೆ ನಡೆಸಬೇಕು. ಹೀಗಾಗಿ ಅಧಿಸೂಚನೆ ಹೊರಡಿಸುವಂತೆ ಕೋರಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ