ಬೆಂಗಳೂರು, ಸೆ.18-ನೆರೆ ಮತ್ತು ಬರ ನಿರ್ವಹಣೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿ ಇಂದು ಕಾಂಗ್ರೆಸ್ ಶಾಸಕರು, ವಿಧಾನಪರಿಷತ್ ಸದಸ್ಯರು ವಿಧಾನಸೌಧ ಸಮೀಪದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದರು.
ಶಾಸಕಾಂಗ ಸಭೆಯ ಬಳಿಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದ ಬಳಿ ತೆರಳಿದ ಕಾಂಗ್ರೆಸ್ ಶಾಸಕರು, ವಿಧಾನಪರಿಷತ್ ಸದಸ್ಯರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ನೆರೆ ನಿರ್ವಹಣೆಗೆ ಹಣ ನೀಡಿಲ್ಲ. ರಾಜ್ಯ ಸರ್ಕಾರ ಕೂಡ ಸಂತ್ರಸ್ತರಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ. ಸರ್ಕಾರ ಇದ್ದೂ, ಇಲ್ಲದಂತಾಗಿದೆ. ಜನ ಬೀದಿಯಲ್ಲಿದ್ದು, ಸರ್ಕಾರದಿಂದ ಯಾವುದೇ ನೆರವು ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜೊತೆಯಲ್ಲಿ ಹಿಂದಿನ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಕಾಂಗ್ರೆಸ್ ಶಾಸಕರಿಗೆ ಹಂಚಿಕೆ ಮಾಡಿದ್ದ ಅನುದಾನವನ್ನು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕಡಿತ ಮಾಡಿದೆ. ಎಲ್ಲಾ ಅನುದಾನವನ್ನು ಬಿಜೆಪಿ ಶಾಸಕರಿಗೆ ಮರು ಹಂಚಿಕೆ ಮಾಡಲಾಗಿದೆ. ಕಾಂಗ್ರೆಸ್ ಶಾಸಕರಿಗೆ ಅನುದಾ£ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.