
ಶ್ರೀಲಕ್ಷ್ಮೀವೃಷಾದ್ರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನವರಸನ್ ಅವರು ನಿರ್ಮಿಸಿರುವ, ರಾಧಿಕಾ ಕುಮಾರಸ್ವಾಮಿ ಪ್ರಧಾನಪಾತ್ರದಲ್ಲಿ ಅಭಿನಯಿಸಿರುವ ‘ದಮಯಂತಿ’ ಚಿತ್ರದ ಟೀಸರ್ ಇದೇ ತಿಂಗಳ 18ರಂದು ಬಿದುಗಡೆಯಾಗಲಿದೆ. ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ ಖ್ಯಾತ ನಟ ಶಿವಕಾರ್ತಿಕೇಯನ್ ಅವರು ಈ ಚಿತ್ರದ ಟೀಸರ್ ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದಾರೆ ಎಂದು ನವರಸನ್ ತಿಳಿಸಿದ್ದಾರೆ.
ನವರಸನ್ ರಚನೆ ಹಾಗೂ ನಿರ್ದೇಶನದ ಈ ಚಿತ್ರ ಕನ್ನಡ, ತಮಿಳು, ತೆಲುಗು, ಮಲೆಯಾಳಂ ಹಾಗೂ ಹಿಂದಿ ಭಾಷೆ ಸೇರಿ ಐದು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಹಾರರ್, ಥ್ರಿಲ್ಲರ್ ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಈಗಾಗಲ್ಲೇ ಪೂರ್ಣವಾಗಿದೆ. ಬೆಂಗಳೂರು, ಮೈಸೂರು, ಹೈದರಾಬಾದ್ ಮುಂತಾದ ಕಡೆ 67ದಿನಗಳ ಚಿತ್ರೀಕರಣ ನಡೆದಿದೆ.
ಆರ್.ಎಸ್.ಗಣೇಶ್ ನಾರಾಯಣ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪಿ.ಕೆ.ಎಚ್ ದಾಸ್ ಅವರ ಛಾಯಾಗ್ರಹಣವಿದೆ. ಮಹೇಶ್ ರೆಡ್ಡಿ ಸಂಕಲನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ರಾಧಿಕಾ ಕುಮಾರಸ್ವಾಮಿ, ಭಜರಂಗಿ ಲೋಕಿ, ಸಾಧುಕೋಕಿಲ, ತಬಲನಾಣಿ, ಮಿತ್ರ, ನವೀನ್ ಕೃಷ್ಣ, ಹೊನ್ನವಳ್ಳಿ ಕೃಷ್ನ, ರವಿಗೌಡ, ಬಲರಾಜವಾಡಿ, ವೀಣಾಸುಂದರ್, ಕೆಂಪೇಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.