ಶೌಚ ಗುಂಡಿ ಸ್ವಚ್ಛತೆ ವೇಳೆ ಕಾರ್ಮಿಕರ ಸಾವು- ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್

ನವದೆಹಲಿ, ಸೆ.18- ಶೌಚ ಗುಂಡಿಗಳನ್ನು ಕೈಗಳಿಂದ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಮೃತಪಡುತ್ತಿರುವ ಕಾರ್ಮಿಕರ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್ ಈವರಿಗೆ ಸುರಕ್ಷಿತ ಸಾಧನಗಳನ್ನು ನೀಡದ ಕೇಂದ್ರ ಸರ್ಕಾರದ ವಿರುದ್ಧ ಕೆಂಡಕಾರಿದೆ.

ಮ್ಯಾನ್‍ಹೋಲ್‍ಗಳ ಮ್ಯಾನುಯಲ್ ಕ್ಲೀನಿಂಗ್ ಮಾಡುವ ಕಾರ್ಮಿಕರಿಗೆ ಸುರಕ್ಷಿತ ಸಾಧನಗಳನ್ನು ಒದಗಿಸುವಂತೆ ಕೋರಿ ಸುಪ್ರೀಂಕೋರ್ಟ್‍ಗೆ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಪೀಠವು ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು.

ನಮ್ಮ ದೇಶದಲ್ಲಿ ಜನರನ್ನು ಗ್ಯಾಸ್ ಚೇಂಬರ್‍ಗಳಿಗೆ ಕಳುಹಿಸಲಾಗುತ್ತಿದೆ. ಪ್ರತಿ ತಿಂಗಳು ಐದಾರು ಮಂದಿ ಕಾರ್ಮಿಕರು ಶೌಚ ಗುಂಡಿ ಸ್ವಚ್ಛತೆ ವೇಳೆ ಸಾವಿಗೀಡಾಗುತ್ತಿದ್ದಾರೆ. ಈ ದುರಂತಗಳನ್ನು ತಪ್ಪಿಸಲು ಕೇಂದ್ರ ಸರ್ಕಾರ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪೀಠವು ಪ್ರಶ್ನಿಸಿಲ್ಲ.

ಕೇಂದ್ರ ಸರ್ಕಾರದ ಪರವಾಗಿ ಹಾಜರಿದ್ದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್ ಇಂತಹ ಕಾರ್ಮಿಕರಿಗೆ ಮಾಸ್ಕ್ ಮತ್ತು ಆಮ್ಲಜನಕ ಸಿಲಿಂಡರ್‍ಗಳನ್ನು ಏಕೆ ಒದಗಿಸುತ್ತಿಲ್ಲ ಎಂದು ಪ್ರಶ್ನಿಸಿ ಕೇಂದ್ರ ಸರ್ಕಾರದ ನಿರ್ಲಕ್ಷ್ಯಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ