ಕೊಕೈನ್‍ನ್ನು ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯ ಬಂಧನ

ಬೆಂಗಳೂರು,ಸೆ.19-ನೈಜೀರಿಯಾ ದೇಶದಿಂದ ಭಾರತಕ್ಕೆ ಬಂದು ಇಲ್ಲಿನ ವೀಸಾ ನಿಯಮಗಳನ್ನು ಉಲ್ಲಂಘನೆ ಮಾಡಿ ಮಾದಕ ವಸ್ತು ಕೊಕೈನ್‍ನ್ನು ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಎಕೇನೆ ಒಕೊಂಕ್ವೊ ಬಂಧಿತ ನೈಜೀರಿಯಾ ಪ್ರಜೆಯಾಗಿದ್ದು, ಈತನಿಂದ 1.70 ಲಕ್ಷ ರೂ. ಮೌಲ್ಯದ ಕೊಕೇನ್ ಮತ್ತು ಮೊಬೈಲ್‍ನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಯು ನೈಜೀರಿಯಾ ದೇಶದಿಂದ ಭಾರತಕ್ಕೆ ಬಂದು ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಭೆರವೇಶ್ವರ ಲೇಔಟ್ 1ನೇ ಮುಖ್ಯರಸ್ತೆಯ ಮನೆಯೊಂದರಲ್ಲಿ ವಾಸವಾಗಿದ್ದುಕೊಂಡು ವೀಸಾ ನಿಯಮ ಉಲ್ಲಂಘಿಸಿ ನಗರದ ವಿವಿಧ ಸ್ಥಳಗಳಲ್ಲಿ ಪರಿಚಿತ ಗ್ರಾಹಕರಿಗೆ ಕೊಕೇನ್‍ನ್ನು ಮಾರಾಟ ಮಾಡುತ್ತಾ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದನು.

ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಮನೆ ಮೇಲೆ ದಾಳಿ ಮಾಡಿ ನೈಜೇರಿಯಾ ಪ್ರಜೆಯನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ