
ಬೆಂಗಳೂರು,ಸೆ.20- ಮುಖ್ಯಮಂತ್ರಿ ಯಡಿಯೂರಪ್ಪನವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಆರೋಪ ಸರಿ ಇದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
ಜೆಪಿಭವನದಲ್ಲಿಂದು ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲಾ ಮುಖಂಡರ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ ಮುಗಿಯಿತು. ಅವರ ಹೇಳಿಕೆ ಸರಿಯಿದೆ ಎಂದು ಸಮರ್ಥಿಸಿಕೊಂಡರು.
ರಾಜಕಾರಣ ನಾಳೆಗೆ ನಿಲ್ಲುವುದಿಲ್ಲ. ನನ್ನ ರಾಜಕಾರಣವೂ ನಿಲ್ಲಲ್ಲ. ಯಡಿಯೂರಪ್ಪನವರ ರಾಜಕಾರಣವೂ ನಿಲ್ಲುವುದಿಲ್ಲ. ಸಿದ್ದರಾಮಯ್ಯನವರ ರಾಜಕಾರಣವೂ ನಿಲ್ಲುವುದಿಲ್ಲ. ಬಹಳಷ್ಟು ಕಾಲವಿದೆ. ಕಾಲ ಬರುತ್ತದೆ. ಆಗ ಮಾತನಾಡುತ್ತೇನೆ ಎಂದು ದೇವೇಗೌಡರು ಹೇಳಿದರು.