ನಾಳೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮೂರನೇ ಟಿ-20 ಕ್ರಿಕೆಟ್ ಪಂದ್ಯ

ಬೆಂಗಳೂರು, ಸೆ.21-ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮೂರನೇ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದ್ದು, ಈ ಮಾರ್ಗದ ಕೆಲವೆಡೆ ಸಂಚಾರ ನಿರ್ಬಂಧ ಮಾಡಲಾಗಿದೆ.

ಕ್ರಿಕೆಟ್ ಪಂದ್ಯ ವೀಕ್ಷಿಸಲು  ಹೆಚ್ಚಿನ ಸಂಖ್ಯೆಯಲ್ಲಿ  ಪ್ರೇಕ್ಷಕರು ವಾಹನಗಳಲ್ಲಿ ಬರುವುದರಿಂದ ಕೆಎಸ್‍ಸಿಎ ಸ್ಟೇಡಿಯಂ ಹಾಗೂ ಸುತ್ತಮುತ್ತಲ ರಸ್ತೆಗಳಲ್ಲಿ  ಸಂಚಾರ ನಿರ್ಬಂಧಿಸಲಾಗಿದೆ.

ನಿಷೇಧ ಸ್ಥಳಗಳು:

ಕ್ವೀನ್ಸ್ ರಸ್ತೆ, ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡೂ ಕಡೆ, ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ, ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ ಸಂಚಾರ ನಿಷೇಧಿಸಲಾಗಿದೆ.

ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆ ಹಾಗೂ ಸೆಂಟ್ರಲ್ ಸ್ಟ್ರೀಟ್ ರಸ್ತೆಯ  ಎರಡೂ ಕಡೆ, ಕಬ್ಬನ್ ರಸ್ತೆಯಲ್ಲಿ, ಸಿ.ಟಿ.ಓ. ವೃತ್ತದಿಂದ ಡಿಕೆನ್ಸ್‍ನ್ ರಸ್ತೆ ಜಂಕ್ಷನ್ ವರೆಗೆ ರಸ್ತೆಯ ಎರಡೂ ಕಡೆ,  ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್‍ನಿಂದ ಡಿಕೆನ್ಸ್‍ನ್ ರಸ್ತೆ ಜಂಕ್ಷನ್ ವರೆಗೆ ಬಿ.ಎಂ.ಟಿ.ಸಿ ಬಸ್ ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಈ ರಸ್ತೆಗಳಲ್ಲಿ ಸಂಜೆ 5 ರಿಂದ ರಾತ್ರಿ 11.30 ಗಂಟೆಯವರೆಗೆ ಆಟೋ ರಿP್ಷÁ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ನಿಲುಗಡೆಗೆ ವ್ಯವಸ್ಥೆ:

ಪಂದ್ಯ ವೀಕ್ಷಣೆ ಮಾಡಲು ಬರುವ ಸಾರ್ವಜನಿಕರ ವಾಹನಗಳನ್ನು ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ, ಮಲ್ಯ ಆಸ್ಪತ್ರೆ ರಸ್ತೆ ಮತ್ತು ಸೆಂಟ್ ಜೋಸೆಫ್ ಬಾಲಕರ ಶಾಲೆ, ಮ್ಯೂಸಿಯಂ ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಪೆÇಲೀಸ್ ವಾಹನಗಳ ನಿಲುಗಡೆ:

ವಿಶೇಷ ಕರ್ತವ್ಯಕ್ಕೆ ನಿಯೋಜನೆ ಮಾಡಿರುವ ಪೆÇಲೀಸ್ ಅಧಿಕಾರಿ/ಸಿಬ್ಬಂದಿಗಳ ವಾಹನಗಳನ್ನು ಕಬ್ಬನ್‍ಪಾರ್ಕ್ ಒಳಭಾಗದ ಕೆ.ಜಿ.ಐ.ಡಿ ಬಿಲ್ಡಿಂಗ್ ಮುಂಭಾಗದ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ