ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಮುಂದಿನ ನಿರ್ಧಾರ ಮಾಜಿ ಸಚಿವ ಆರ್.ಶಂಕರ್

ಬೆಂಗಳೂರು, ಸೆ.21- ರಾಜ್ಯದಲ್ಲಿ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಮಾಜಿ ಸಚಿವ ಆರ್.ಶಂಕರ್  ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಚುನಾವಣಾ ಆಯೋಗ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ ಎಂಬ ನಿರೀಕ್ಷೆ ಇರಲಿಲ್ಲ. ಇಂದು ಚುನಾವಣೆ ಘೋಷಣೆ ಮಾಡಿದೆ. ಈ ಸಂಬಂಧ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಅಲ್ಲದೆ ಶಾಸಕತ್ವವನ್ನು ಅನರ್ಹಗೊಳಿಸಿರುವ ಪ್ರಕರಣಕ್ಕೆ  ಸಂಬಂಧಿಸಿದ ವಿಚಾರಣೆ ಸೋಮವಾರ ಸುಪ್ರೀಂಕೋರ್ಟ್‍ನಲ್ಲಿ ಬರುತ್ತಿದ್ದು, ಅದನ್ನು ಕಾದು ನೋಡುತ್ತಿದ್ದೇವೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ