
ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಇಂದು ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಪಿ ಚಿದಂಬರಂ ಅವರನ್ನು ಭೇಟಿಯಾದರು.
ಐಎನ್ ಎಕ್ಸ್ ಮೀಡಿಯಾ ಹಗರಣದಲ್ಲಿ ನ್ಯಾಯಾಂಗ ಬಂಧನ ಎದುರಿಸುತ್ತಿರವ ಪಿ ಚಿದಂಬರಂ ಸೆ.5ರಿಂದ ತಿಹಾರ್ ಜೈಲಿನಲ್ಲಿದ್ದಾರೆ.
ಒಂದು ಭೇಟಿಯ ಅವಧಿಯಲ್ಲಿ ಒಬ್ಬರನ್ನು ಮಾತ್ರ ಭೇಟಿಯಾಗಲು ಅವಕಾಶ ಇರುವುದರಿಂದ ಸೋನಿಯಾ ಗಾಂಧಿ ಮತ್ತು ಮನಮೋಹನ್ ಸಿಂಗ್ ಅವರು ಅದೇ ತಿಹಾರ್ ಜೈಲಿನಲ್ಲಿರುವ ಕರ್ನಾಟಕದ ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿಲ್ಲ ಎಂದು ವರದಿಯಾಗಿದೆ.