ಉಪಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷಿತ ಗೆಲುವಿನ ವಿಶ್ವಾಸವಿಲ್ಲ-ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ಸೆ.24- ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷಿತ ಗೆಲುವಿನ ವಿಶ್ವಾಸವಿಲ್ಲದ್ದರಿಂದ ವಿಧಾನಮಂಡಲದ ಅಧಿವೇಶನವನ್ನು ಮೂರು ದಿನಕ್ಕೆ ಮೊಟಕುಗೊಳಿಸಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಅಧಿವೇಶನದಲ್ಲೇ ಪೂರ್ಣ ಪ್ರಮಾಣದ ಬಜೆಟ್‍ಗೆ ಒಪ್ಪಿಗೆ ಪಡೆಯಬಹುದಿತ್ತು. ಆದರೆ ಮತ್ತೊಂದು ಬಜೆಟ್ ಮಂಡಿಸುವ ಉದ್ದೇಶದಿಂದ ಲೇಖಾನುದಾನಪಡೆಯಲಾಗಿತ್ತು. ಈಗ ವಿಧಾನಸಭೆ ಉಪಚುನಾವಣೆ ನೀತಿಸಂಹಿತೆ ನೆಪವಿಟ್ಟುಕೊಂಡು 10 ದಿನಗಳಕಾಲ ಕರೆಯಲಾಗಿದ್ದ ಅಧಿವೇಶನವನ್ನು ಮೂರು ದಿನಕ್ಕೆ ಸೀಮಿತಗೊಳಿಸಲಾಗಿದೆ. ಇಲಾಖಾವಾರು ಬೇಡಿಕೆಗಳ ಮೇಲೆ ಚರ್ಚೆಯಾಗಿಲ್ಲ. ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಅದರ ಬಗ್ಗೆಯೂ ಚರ್ಚೆ ಮಾಡಬೇಕಿದೆ ಎಂದರು.

ಬಿಜೆಪಿಯವರಿಗೆ ಉಪಚುನಾವಣೆಯಲ್ಲಿ ನಿರೀಕ್ಷಿತ ಅಗತ್ಯವಿರುವಷ್ಟು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬ ವಿಶ್ವಾಸವಿಲ್ಲ. ಅವರಲ್ಲೇ ಅನಿಶ್ಚಿತತೆ ಮುಂದುವರೆದಿದೆ. ಒಂದು ವೇಳೆ ಅವರಿಗೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದಿದ್ದರೆ ಅ.24 ನಂತರವೇ ಅಧಿವೇಶನ ಕರೆಯಬಹುದಿತ್ತು ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ