ಬೆಂಗಳೂರು, ಅ.2- ನೆರೆ ಸಂತ್ರಸ್ತರಿಗೆ ಸ್ಪಂದಿಸದೇ ಇರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ನಾಳೆ ರಾಜಾಜಿನಗರದ ರಾಮಮಂದಿರ ಆಟದ ಮೈದಾನದಿಂದ ಫ್ರೀಡಂಪಾರ್ಕ್‍ವರೆಗೆ ಉತ್ತರ ಕರ್ನಾಟಕ ಉಳಿಸಿ ಎಂಬ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ.
ಪ್ರತಿಭಟನೆಯ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಉತ್ತರ ಕರ್ನಾಟಕ ಸಂಘ-ಸಂಸ್ಥೆಗಳ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ್ ಆರ್.ಮೇಟಿ, ನೆರೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ.ಕೇಂದ್ರ ಸಮೀಕ್ಷೆ ನಡೆಸಿದರೂ ಪರಿಹಾರ ಕೊಟ್ಟಿಲ್ಲ. ಹೀಗಾಗಿ ಸರ್ಕಾರಗಳ ಗಮನ ಸೆಳೆಯಲು ಉತ್ತರ ಕರ್ನಾಟಕ ಉಳಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ನಿವೃತ್ತ ಪೆÇಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಅವರು ಪ್ರತಿಭಟನೆಯ ನೇತೃತ್ವ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.