ಅಧಿವೇಶನ ಅವಧಿ ವಿಸ್ತರಣೆಗೆ ಪ್ರತಿಪಕ್ಷಗಳ ಆಗ್ರಹ

ಬೆಂಗಳೂರು, ಅ.7- ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನದ ಅವಧಿಯನ್ನು ವಿಸ್ತರಣೆ ಮಾಡುವಂತೆ ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿವೆ.
ಅ.10 ರಿಂದ 12ರ ವರೆಗೆ ಮೂರು ದಿನಗಳ ಕಾಲ ಉಭಯÀ ಸದನಗಳ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ಬಜೆಟ್ ಅನುಮೋದನೆ ಪಡೆಯಬೇಕಾಗಿದೆ.
ಬೆಳಗಾವಿಯಲ್ಲಿ ನಡೆಸಬೇಕಾಗಿದ್ದ ಚಳಿಗಾಲದ ಅವೇಶನವನ್ನು ಬೆಂಗಳೂರಿನಲ್ಲಿ ನಡೆಸಲಾಗುತ್ತಿದೆ.ಕೇವಲ ಮೂರು ದಿನ ಅವೇಶನ ನಡೆಸಿ ಬಜೆಟ್‍ಗೆ ಒಪ್ಪಿಗೆ ಪಡೆಯುವುದು ಸರಿಯಲ್ಲ. ಹೀಗಾಗಿ ಕನಿಷ್ಟ ಇನ್ನೊಂದು ವಾರ ಕಾಲ ಅವೇಶನ ವಿಸ್ತರಣೆ ಮಾಡಬೇಕು ಎಂದು ಕಾಂಗ್ರೆಸ್-ಜೆಡಿಎಸ್ ಈಗಾಗಲೇ ಆಗ್ರಹಿಸಿವೆ.

ಪ್ರಸಕ್ತ ಸಾಲಿನ ಆಯವ್ಯಯದ ಬಗ್ಗೆ ಸದನದಲ್ಲಿ ಸುದೀರ್ಘ ಚರ್ಚೆಯಾಗಿಲ್ಲ. ಇಲಾಖಾವಾರು ಬೇಡಿಕೆಗಳ ಮೇಲೆ ಚರ್ಚೆ ನಡೆಸಿ ಸರ್ಕಾರದಿಂದ ಉತ್ತರ ಪಡೆಯಬೇಕಿದೆ.ಇದಕ್ಕೆ ಮೂರು ದಿನಗಳ ಕಾಲ ಸಾಕಾಗುವುದಿಲ್ಲ ಎಂದು ಉಭಯ ಪಕ್ಷಗಳು ಒತ್ತಾಯಿಸಿವೆ.
ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಬಂದು ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.ಹೀಗಾಗಿ ಬೆಳಗಾವಿಯ ಸುವರ್ಣಸೌಧದಲ್ಲೇ ಅವೇಶನವನ್ನೂ ನಡೆಸಬೇಕೆಂದು ಆಗ್ರಹಿಸಿದ್ದವು.ಇದಕ್ಕೆ ಸರ್ಕಾರ ಮಣಿಯಲಿಲ್ಲ.
ರಾಜ್ಯದಲ್ಲಿ ಉಂಟಾಗಿರುವ ನೆರೆ ಹಾವಳಿ, ಅತಿವೃಷ್ಟಿ, ಬರ ಪರಿಸ್ಥಿತಿ ಮೊದಲಾದ ಜ್ವಲಂತ ಸಮಸ್ಯೆಗಳ ಬಗ್ಗೆ ಸವಿವರವಾಗಿ ಚರ್ಚೆ ಮಾಡಲು ಹೆಚ್ಚಿನ ಅವಕಾಶ ಬೇಕಾಗಿದೆ. ಹೀಗಾಗಿ ಅವೇಶನದ ಅವಯನ್ನು ಕನಿಷ್ಟ ಒಂದು ವಾರವಾದರೂ ವಿಸ್ತರಿಸಬೇಕೆಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿವೆ.

ನೆರೆ ಹಾವಳಿ ಪೀಡಿತ ಪ್ರದೇಶಗಳಲ್ಲಿ ಸಮರ್ಪಕ ಪರಿಹಾರ ಕಾರ್ಯ ಕೈಗೊಂಡಿಲ್ಲ ಎಂದು ಈಗಾಗಲೇ ಪ್ರತಿಭಟನೆ ಮಾಡಿ ಸರ್ಕಾರದ ಗಮನವನ್ನು ಪ್ರತಿಪಕ್ಷಗಳು ಸೆಳೆದಿವೆ. ಇದೇ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ ನಡೆಸಿವೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೂಡ ಮೂರು ದಿನಗಳ ಅವೇಶನ ಏನೇನೂ ಸಾಲುವುದಿಲ್ಲ. ಅವೇಶನದ ಅವಯನ್ನು ವಿಸ್ತರಣೆ ಮಾಡಿ ನೆರೆ-ಬರ, ರೈತರ ಸಾಲಮನ್ನಾ, ಬಡವರ ಬಂ`ು, ಋಣಮುಕ್ತ ಕಾಯ್ದೆ ಅನುಷ್ಠಾನ ಮೊದಲಾದ ವಿಷಯಗಳನ್ನು ಸಮಗ್ರವಾಗಿ ಚರ್ಚೆ ನಡೆಸಬೇಕು ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೂಡ ಅವೇಶನದ ಅªಧಿÀಯನ್ನು ಹೆಚ್ಚಿಸುವಂತೆ ಈಗಾಗಲೇ ಆಗ್ರಹಿಸಿದ್ದಾರೆ.
ಜೆಡಿಎಸ್ ರಾಜ್ಯಾ`್ಯಕ್ಷ ಎಚ್.ಕೆ.ಕುಮಾರಸ್ವಾಮಿ ಕೂಡ ಕನಿಷ್ಟ ಎರಡು ವಾರಗಳ ಕಾಲ ಅಧಿವೇಶನ ನಡೆಸುವಂತೆ ಸರ್ಕಾರವನ್ನು ಕೋರಿದ್ದರು. ಅವೇಶನದ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಸದನದ ಕಾರ್ಯ-ಕಲಾಪಗಳ ಸಲಹಾ ಸಮಿತಿ ಸ`ಭೆ ನಡೆಯಲಿದ್ದು, ಆ ಸಭೆಯಲ್ಲಿ ಸಭಾ ನಾಯಕರು, ಪ್ರತಿಪಕ್ಷಗಳ ನಾಯಕರು ಪಾಲ್ಗೊಳ್ಳುತ್ತಾರೆ.ಆಗ ಅಧಿವೇಶನ ನಿಗದಿಯಂತೆ ನಡೆಸುವುದು ಇಲ್ಲವೆ ಅಧಿÉೀಶನದ ಅªಧಿÀಯನ್ನು ವಿಸ್ತರಣೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳೂ ಇವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ