ಮಂಡ್ಯ: ಶ್ರೀರಂಗಪಟ್ಟಣ ಡಿವೈಎಸ್ಪಿ ಯೋಗಾನಂದ್ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ. ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಮಂಡ್ಯ ತಾಲೂಕು ಬಾಬುರಾಯನಕೊಪ್ಪಲಲ್ಲಿ ಘಟನೆ ನಡೆದಿದೆ. ಕೈ ಕಾಲಿನ ನರ ಕೊಯ್ದುಕೊಂಡು ಯೋಗಾನಂದ್ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಮನೆಯಲ್ಲಿಯೇ ಈ ಘಟನೆ ನಡೆದಿದೆ. ಈ ವೇಳೆ ತೀವ್ರ ರಕ್ತಸ್ರಾವ ಉಂಟಾಗಿದೆ. ತಕ್ಷಣಕ್ಕೆ ಅವರನ್ನು ಮೈಸೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಯೋಗಾನಂದ್ ಆತ್ಮಹತ್ಯೆ ಪ್ರಯತ್ನ ಮಾಡಿರುವ ವಿಚಾರ ಸಾಕಷ್ಟು ಅನುಮಾನ ಹುಟ್ಟು ಹಾಕಿದೆ. ಕೆಲಸದ ಒತ್ತಡದ ಮತ್ತು ಮರೆಗುಳಿ ಸಮಸ್ಯೆಯಿಂದ ಅವರು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ, ಯೋಗಾನಂದ್ ಆರೋಗ್ಯ ಗಂಭೀರವಾಗಿದೆ. ಅವರಿಗೆ ವೈದ್ಯರು ಹೆಚ್ಚಿನ ಚಿಕಿತ್ಸೆ ನೀಡುತ್ತಿದ್ದಾರೆ.