ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಕರ್ನಾಟಕ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ದೆಹಲಿ ಹೈಕೋರ್ಟ್ ನಾಳೆಗೆ ಮುಂದೂಡಿದೆ.
ಡಿಕೆ ಶಿವಕುಮಾರ್ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಕೋರ್ಟ್ ಗೆ ಹಾಜರಾಗದಿದ್ದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನಾಳೆಗೆ ಮುಂದೂಡುವಂತೆ ಕಿರಿಯ ವಕೀಲರು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್ ಪೀಠ ನಾಳೆ ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ದೆಹಲಿಯ ಇಡಿ ವಿಶೇಷ ನ್ಯಾಯಾಲಯ ಜಾಮೀನು ರದ್ದು ಮಾಡಿದ್ದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆ ಹೈಕೋರ್ಟ್ ವಿಚಾರಣೆ ನಡೆಸಲಿದ್ದು, ಡಿಕೆಶಿ ಅವರಿಗೆ ಜಾಮೀನು ಸಿಗಲಿದೆಯೇ ಎಂದು ಕಾದು ನೋಡಬೇಕಿದೆ.