
ನವದೆಹಲಿ; ಮಂಗಳವಾರ ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಮುಂದೂಡಿದ ಬೆನ್ನಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಡಿಕೆಶಿ ಅವರ ತಾಯಿ ಗೌರಮ್ಮ ಮತ್ತು ಪತ್ನಿ ಉಷಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.
ಸಮನ್ಸ್ ಅನ್ವಯ ಗೌರಮ್ಮ ಮತ್ತು ಉಷಾ ಬುಧವಾರವೇ ಇಡಿ ವಿಚಾರಣೆಗೆ ಹಾಜರಾಗಬೇಕಿದೆ. ಆದರೆ, ಇಡಿ ವಿಚಾರಣೆಯಿಂದ ಬಚಾವಾಗಲು ಅಧಿಕಾರಿಗಳು ನೀಡಿರುವ ಸಮನ್ಸ್ ರದ್ದು ಮಾಡುವಂತೆ ಕೋರಿ ಇಬ್ಬರೂ ಇದೀಗ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಡಿಕೆಶಿ ಪ್ರಕರಣದ ಇತರೆ ಆರೋಪಿಗಳಿಗೆ ನೀಡಿರುವ ಸಮನ್ಸ್ ಅನ್ನು ರದ್ದುಗೊಳಿಸುವ ಮೂಲಕ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ. ಇದೇ ರೀತಿ ತಮಗೂ ರಿಲೀಫ್ ಸಿಗಬಹುದು ಎಂಬ ಮಹತ್ವಾಕಾಂಕ್ಷೆಯಲ್ಲಿ ಡಿಕೆಶಿ ಅವರ ತಾಯಿ ಮತ್ತು ಪತ್ನಿ ಇದ್ದಾರೆ.
ಆದರೆ, ಇಡಿ ಸಮನ್ಸ್ ರದ್ದು ಕೋರಿ ಇವರು ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಹೈಕೋರ್ಟ್ ಇಂದು ವಿಚಾರಣೆ ನಡೆಸಲಿದ್ದು, ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.