ಜಂಬೂಗೆ 49ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ

ಟೀಮ್ ಇಂಡಿಯಾದ ಮಾಜಿ ನಾಯಕ ಅನಿಲ್ ಕುಂಬ್ಳೆ 49ನೇ ಹುಟ್ಟು ಹಬ್ಬದ ಸಂಭ್ರಮ ಆಚರಿಸಿಕೊಂಡಿದ್ದಾರೆ.
ಟೀಂ ಇಂಡಿಯಾದಲ್ಲಿ ಜಂಬೂ ಎಂದೇ ಖ್ಯಾತಿ ಪಡೆದಿದ್ದ ಅನಿಲ್ ಕುಂಬ್ಳೆ ಟೆಸ್ಟ್ ಆವೃತ್ತಿಯಲ್ಲಿ ತಂಡದ ಪರ ಅತಿ ಹೆಚ್ಚು ವಿಕೆಟ್‍ಗಳನ್ನ ಪಡೆದ ಬೌಲರ್ ಆಗಿದ್ದಾರೆ. ಫೀರೋಜ್ ಷಾ ಕೋಟ್ಲಾ ಅಂಗಳದಲ್ಲಿ ಪಾಕ್ ವಿರುದ್ಧ ಟೆಸ್ಟ್ ಪಮದ್ಯದಲ್ಲಿ ಒಂದೇ ಇನ್ನಿಂಗ್ಸ್‍ನಲ್ಲಿ ಎಲ್ಲ 10 ವಿಕೆಟ್‍ಗಳನ್ನ ಪಡೆದು ಮಿಂಚಿದ್ರು.

ಅನಿಲ್ ಕುಂಬ್ಳೆ ಟೀಮ್ ಇಂಡಿಯಾದ ನಾಯಕನಾಗಿ ತಂಡವನ್ನ ಮುನ್ನಡೆಸಿದ್ದರು. ನಂತರ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ನಂತರ ಅನಿಲ್ ಕುಂಬ್ಳೆ ಟೀಮ್ ಇಂಡಿಯಾ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. ಸದ್ಯ ಅನಿಲ್ ಕುಂಬ್ಳೆ ಐಪಿಎಲ್‍ನಲ್ಲಿ ಪಂಜಾಬ್ ತಂಡದ ಮುಖ್ಯ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಅನಿಲ್ ಕುಂಬ್ಳೆ ಹುಟ್ಟುಹಬ್ಬಕ್ಕೆ ತಂಡದ ಆಟಗಾರ ಹರ್ಭಜನ್ ಸಿಂಗ್ ಮಾಜಿ ಆಟಗಾರರಾದ ಗೌತಮ್ ಗಂಭಿರ್ ಮತ್ತು ಮೊಹ್ಮದ್ ಕೈಫ್ ಟ್ವೀಟರ್ ಮೂಲಕ ಶುಭಾಶಯ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ