ಬಿಗ್ ಬಿ ಅಮಿತಾಭ್ ಬಚ್ಚನ್ ಆಸ್ಪತ್ರೆಗೆ ದಾಖಲು

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಯಕೃತ್ತು ಸಂಬಂಧಿಸಿದ ಖಾಯಿಲೆಯಿಂದ ಅಮಿತಾಭ್ ಬಚ್ಚನ್ ಬಳಲುತ್ತಿದ್ದಾರೆಂದು ವರದಿಯಾಗಿದೆ.

ಕಳೆದ ಮಂಗಳವಾರ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಅಮಿತಾಭ್ ಅವರನ್ನು ನಾನವತಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಅಮಿತಾಭ್ ಅವರ ಲಿವರ್ ನ ಶೇ.75ರಷ್ಟು ಈಗಾಗಲೇ ಹಾನಿಯಾಗಿದೆ ಎಂದು ಅವರೇ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದರು. ತಾನು ಕೇವಲ 25% ಲಿವರ್ ನಲ್ಲೇ ಬದುಕುತ್ತಿದ್ದೇನೆ ಎಂದು ಹೇಳಿಕೊಂಡಿದ್ದರು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ