ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ: ವಿರಾಟ್ ಪಡೆಗೆ ಆರಂಭಿಕ ಆಘಾತ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.
ಈಗಾಗಲೇ 2-0 ಅಂತರದಿಂದ ಸರಣಿ ಗೆದ್ದಿರುವ ಕೊಹ್ಲಿ ಪಡೆ ಹರಿಣಗಳ ವಿರುದ್ಧ ಮೂರನೇ ಟೆಸ್ಟ್ ಪಂದ್ಯವನ್ನು ಗೆದ್ದು ಕ್ಲೀನ್ ಸ್ವೀಪ್ ಮಾಡುವ ಗುರಿ ಹೊಂದಿದೆ.
ಟೆಸ್ಟ್‍ಗೆ ಪಾದರ್ಪಣೆ ಮಾಡಿದ ಶಾಬಾಜ್ ನದೀಮ್
ರಾಂಚಿಯಲ್ಲಿ ಆರಂಭವಾದ ಟೆಸ್ಟ್ ಪಂದ್ಯದಲ್ಲಿ ವೇಗಿ ಇಶಾಂತ್ ಶರ್ಮಾ ಅವರನ್ನ ಕೈಬಿಟ್ಟು ಸ್ಪಿನ್ನರ್ ಶಾಬಾಜ್ ನದೀಂ ಸ್ಥಾನ ಪಡೆದಿದ್ದಾರೆ. ನಾಯಕ ವಿರಾಟ್ ಕೊಹ್ಲಿಯಿಂದ ಟೆಸ್ಟ್ ಕ್ಯಾಪ್ ಪಡೆತಯವ ಮೂಲಕ ಶಾಬಾಜ್ ನದೀಮ್ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿದ್ರು.
ಟೀಮ್ ಇಂಡಿಯಾಕ್ಕೆ ಆರಂಭಿಕ ಆಘಾತ
ಟಾಸ್ ಗೆದ್ದು ಮೊಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಆರಂಭಿಕ ಆಘಾರ ಅನುಭವಿಸಿದೆ. ಮೊದಲ ಎರಡು ಪಂದ್ಯಗಳಲ್ಲಿ ಶತಕ ಸಿಡಿಸಿ ಅಬ್ಬರಿಸಿದ್ದ ಕನ್ನಡಿಗ ಮಾಯಂಕ್ ಅಗರ್‍ವಾಲ್ ಮೂರನೇ ಟೆಸ್ಟ್ ಪಂದ್ಯದಲ್ಲಿ ವೇಗಿ ರಬಾಡಾಗೆ ವಿಕೆಟ್ ಒಪ್ಪಿಸಿ ಹೊರ ನಡೆದಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ