![crackers balast 1](http://kannada.vartamitra.com/wp-content/uploads/2019/10/crackers-balast-1-508x381.jpg)
ಗುಣ, ಮಧ್ಯಪ್ರದೇಶ, ಅ.19 :ಪಟಾಕಿ ತಯಾರಿಸುವಾಗ ಭಾರೀ ಆಸ್ಫೋಟ ಸಂಭವಿಸಿ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಗುಣ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.
ಈ ಘಟನೆಯಲ್ಲಿ ಇನ್ನಿಬ್ಬರಿಗೆ ತೀವ್ರ ಗಾಯಗಳಾಗಿದ್ದು , ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ.
ದೀಪಾವಳಿಗಾಗಿ ಪಟಾಕಿಗಳನ್ನು ತಯಾರಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕ ಕಿಡಿಯಿಂದ ಬೆಂಕಿ ತಗುಲಿ ದಾಸ್ತಾನು ಮಾಡಲಾಗಿದ್ದ ಪಟಾಕಿಗಳು ಸ್ಫೋಟಗೊಂಡವು.