![zameer-ahmedh](http://kannada.vartamitra.com/wp-content/uploads/2019/10/zameer-ahmedh-572x381.jpg)
ಬೆಂಗಳೂರು: ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಖಾನ್ ಲಘು ಹೃದಯಾಘಾತಕ್ಕೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶನಿವಾರ ಬೆಳಗ್ಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು. ಈ ವೇಳೆ ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ. ಈ ವೇಳೆ ಅವರಿಗೆ ಲಘು ಹೃದಯಾಘಾತವಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಲಘು ಹೃದಯಾಘಾತಕ್ಕೆ ಒಳಗಾಗಿರುವ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದು, ನಾಳೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ.
ಐಎಂಎಂ ಪ್ರಕರಣದಲ್ಲಿ ಜಮೀರ್ ಅಹ್ಮದ್ ಖಾನ್ ಹೆಸರು ಕೇಳಿ ಬಂದಿದ್ದು, ಈ ಪ್ರಕರಣದ ಕುರಿತು ಅವರು ವಿಚಾರಣೆಗೂ ಹಾಜರಾಗಿದ್ದರು.