ಕುಸಿದು ಬಿದ್ದು ಮೃತಪಟ್ಟ ವಿದ್ಯಾರ್ಥಿನಿ

ಬೆಂಗಳೂರು,ಅ.19: ಕಾಲೇಜಿನಲ್ಲಿ ಫ್ರೆಶರ್ಸ್ ಡೇ ನಿಮಿತ್ತ ವಿದ್ಯಾರ್ಥಿಗಳೆಲ್ಲ ರಿಹರ್ಸಲ್ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪೀಣ್ಯ 1ನೇ ಹಂತದಲ್ಲಿರುವ ಆಚಾರ್ಯ ಕಾಲೇಜಿನಲ್ಲಿ ಮೊದಲ ವರ್ಷದ ಎಂಬಿಎ ವ್ಯಾಸಂಗ ಮಾಡುತ್ತಿದ್ದ ಶಾಲಿನಿ(21) ಮೃತಪಟ್ಟ ವಿದ್ಯಾರ್ಥಿನಿ.
ಶ್ರೀರಾಂಪುರ, ಲಕ್ಷ್ಮಿ ನಾರಾಯಣಪುರದ 11ನೇ ಕ್ರಾಸ್ ನಿವಾಸಿಯಾದ ಶಾಲಿನಿ ನಿನ್ನೆ ಎಂದಿನಂತೆ ಕಾಲೇಜಿಗೆ ತೆರಳಿದ್ದರು. ಕಾಲೇಜಿನಲ್ಲಿ ಫೆಶರ್ಸ್ ಡೇ ಆಚರಿಸುವ ಸಂಬಂಧ ಸಾಂಸ್ಕೃತಿಕ  ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳೆಲ್ಲ ಸೇರಿ ಸಂಜೆ ಪ್ರಾಕ್ಟೀಸ್ ಮಾಡುತ್ತಿದ್ದರು.
ಈ ಸಂದರ್ಭದಲ್ಲಿ ಶಾಲಿನಿ ಕುಸಿದು ಬಿದ್ದಿದ್ದಾರೆ ತಕ್ಷಣ ಈಕೆಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಯಾವ ಕಾರಣದಿಂದ ಶಾಲಿನಿ ಮೃತಪಟ್ಟಿದ್ದಾರೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಹೃದಯಾಘಾತದಿಂದ ಮೃತಪಟ್ಟಿದ್ದಾರೆಂಬ ಶಂಕೆ ವ್ಯಕ್ತವಾಗಿದೆ.
ಈ ಘಟನೆ ಸಂಬಂಧ ಪೀಣ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಸಪ್ತಗಿರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ವಾರಸುದಾರರಿಗೆ ಹಸ್ತಾಂತರಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ