ಬಡವರ ಆರೋಗ್ಯ ಸುಧಾರಣೆಗೆ ಆದ್ಯತೆ ನೀಡಬೇಕು-ಸಚಿವ ಬಿ.ಶ್ರೀರಾಮುಲು

ಬೆಂಗಳೂರು, ಅ.21- ಬಡವರ ಆರೋಗ್ಯ ಸುಧಾರಣೆಗೆ ಆದ್ಯತೆ ನೀಡಬೇಕೆಂದು ವೈದ್ಯಾಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ನಿರ್ದೇಶನ ನೀಡಿದರು.

ವಿಕಾಸಸೌಧದಲ್ಲಿ ನಡೆದ ಜಿಲ್ಲಾ ಮಟ್ಟದ ಆರೋಗ್ಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಂತ್ರಿ ಸ್ಥಾನ ಶಾಶ್ವತವಲ್ಲ. ಹಾಗೆಯೇ ಸರ್ಕಾರಗಳು ಬದಲಾಗುತ್ತಿರುತ್ತವೆ. ಆರೋಗ್ಯ ಸೇವೆ ಎಂಬುದು ನಿರಂತರವಾಗಿ ಜನರಿಗೆ ದೊರೆಯುತ್ತಿರಬೇಕು ಎಂದರು.

ಆಯುಷ್ಮಾನ್ ಆರೋಗ್ಯ ಯೋಜನೆ  ಜನರಿಗೆ ಸಮಾಧಾನವಾಗುವ ರೀತಿಯಲ್ಲಿ ಅನುಷ್ಠಾನವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು

ರಾಜ್ಯದ ಉದ್ದಗಲಕ್ಕೂ ತಾವು ಪ್ರವಾಸ ಕೈಗೊಂಡು ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡಲಾಗುತ್ತಿದೆ. ವಾಸ್ತವ್ಯದ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿದ್ದು, ಅದಕ್ಕೆ ಪ್ರತಿಕ್ರಿಯಿಸುವುದಿಲ್ಲ. ತಮ್ಮ ವಾಸ್ತವ್ಯದಿಂದ ಆಸ್ಪತ್ರೆಗಳ ಸ್ಥಿತಿಯಲ್ಲಿ ಅಲ್ಪ ಬದಲಾವಣೆಯದರೂ ಸಾಕು.ವಸ್ತು ಸ್ಥಿತಿ ತಿಳಿಯುವ ಉದ್ದೇಶದಿಂದ ವಾಸ್ತವ್ಯ ಮಾಡಲಾಗುತ್ತಿದೆ ಎಂದರು.

ಆವರ್ತನಿಧಿಯ ಹಣವನ್ನು ಖರ್ಚು ಮಾಡದಿದ್ದರೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದ ಬೇಡಿಕೆ ಮಂಡಿಸಲು ಸಾಧ್ಯವಾಗುವುದಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು ಡ್ರಗ್ಸ್ ಖದೀರಿಸಬೇಕೆಂದು ಸಲಹೆ ಮಾಡಿದರು.

ತಾವು ಈ ಹಿಂದೆ ಆರೋಗ್ಯ ಸಚಿವರಾಗಿದ್ದಾಗ 108 ಆರೋಗ್ಯ ಕವಚ, ವಾಜಪೇಯಿ ಆರೋಗ್ಯ ಸ್ತ್ರಿ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಸಚಿವರು ಅಥವಾ ಸರ್ಕಾರ ಬದಲಾದರೂ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಆರೋಗ್ಯ ಸೇವೆ ನಿರಂತರವಾಗಿ ದೊರೆಯಬೇಕು.ಗುಣಮಟ್ಟದ ಆರೋಗ್ಯ ಸೇವೆ ದೊರೆಯಬೇಕೆಂಬುದೇ ತಮ್ಮ ಅಪೇಕ್ಷೆ ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಕ್ತರ್,ಆ ಯುಷ್ ಇಲಾಖೆ ಆಯುಕ್ತರಾದ ಮೀನಾಕ್ಷಿ ನೇಗಿ, ರಾಷ್ಟ್ರೀಯ ಆರೋಗ್ಯ ಮಿಷನ್‍ನ ಡಾ.ರಿಚರ್ಡ್, ಡ್ರಗ್ಸ್ ಮತ್ತು ಲಾಜಿಸ್ಟಿಕ್ ಹೆಚ್ಚುವರಿ ನಿರ್ದೇಶಕಿ ಮಂಜುಶ್ರೀ, ಯೋಜನಾ ನಿರ್ದೇಶಕ ಪ್ರಭುದೇವ್ ಮತ್ತಿತರರು ಪಾಲ್ಗೊಂಡಿದ್ದರು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ