ಇಂದು ಸುಪ್ರೀಂಕೋರ್ಟ್​​ನಲ್ಲಿ ಅನರ್ಹ ಶಾಸಕರ ಭವಿಷ್ಯ ನಿರ್ಧಾರ: ರೆಬೆಲ್ಸ್​ಗೆ ಸಿಎಂ ಬಿಎಸ್​ವೈ ಧೈರ್ಯ​

ಬೆಂಗಳೂರುಕಾಂಗ್ರೆಸ್​-ಜೆಡಿಎಸ್ಪಕ್ಷದ 17 ಅನರ್ಹ ಶಾಸಕರ ಪ್ರಕರಣದ ಕುರಿತಾದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ಇಂದೇ ವಿಚಾರಣೆ ನಡೆಸುತ್ತಿದೆ. ನಿನ್ನೆ ಕಾಂಗ್ರೆಸ್​​ ಪರ ವಕೀಲ ಕಪೀಲ್ ಸಿಬಲ್ ಮನವಿ ಪುರಸ್ಕರಿಸಿದ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ನ್ಯಾಯಪೀಠ, ಇಂದು ನಡೆಯಬೇಕಿದ್ದ ವಿಚಾರಣೆ  ಮುಂದೂಡಿತ್ತು. ಬಳಿಕ ಮೊದಲು ನಿಗದಿಯಾಗಿದ್ದ ದಿನಾಂಕಕ್ಕೆ ಅರ್ಜಿ ವಿಚಾರಣೆ ಮಾಡುವಂತೆ ಕೇಂದ್ರ ಚುನಾವಣೆ ಆಯೋಗ ಮನವಿ ಮಾಡಿತು. ಇದೀಗ ಚುನಾವಣಾ ಆಯೋಗದ ಮನವಿ ಮೇರೆಗೆ ಸುಪ್ರೀಂಕೋರ್ಟ್ಇಂದೇ ವಿಚಾರಣೆ ಕೈಗೆತ್ತಿಕೊಂಡಿದೆ. ಹಾಗಾಗಿ ಅಂತಿಮ ತೀರ್ಪಿನ ಬಗ್ಗೆ ಅನರ್ಹ ಶಾಸಕರು ಆಂತಕಕ್ಕೀಡಾಗಿದ್ದಾರೆ.

ಈ ಹಿಂದೆ​ ಸೆ.27ರಂದು ಅನರ್ಹ ಶಾಸಕರ ಅರ್ಜಿ ವಿಚಾರಣೆ ನಡೆದಿದ್ದ ಸುಪ್ರೀಂಕೋರ್ಟ್ ಉಪಚುನಾವಣೆಗೆ ತಾತ್ಕಾಲಿಕ ತಡೆ ನೀಡಿತ್ತು. ಪ್ರಕರಣದ ವಿಚಾರಣೆಯನ್ನು ತರಾತುರಿಯಲ್ಲಿ ಮಾಡಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿನ ಅಂಶಗಳನ್ನು ಜಾಗರೂಕವಾಗಿ ವಿಚಾರಣೆಗೆ ಒಳಪಡಿಸಬೇಕು ಎಂದು ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್, ಅನರ್ಹ ಶಾಸಕರ ಅರ್ಜಿ ಸಂಬಂಧ ತೀರ್ಪು ನೀಡುವ ತನಕ ಕರ್ನಾಟಕ ಉಪಚುನಾವಣೆಯನ್ನು ಮುಂದೂಡಿತ್ತು. ಅಕ್ಟೋಬರ್​ 21ರಂದು ನಡೆಯಬೇಕಿದ್ದ ಚುನಾವಣೆವನ್ನೇ ಮುಂದೂಡಿದ ಸುಪ್ರೀಂಕೋರ್ಟ್​, ವಿಚಾರಣೆಯನ್ನು ಅ.22ಕ್ಕೆ ನಿಗದಿ ಮಾಡಿತ್ತು.
ಕಳೆದ ಮೇ ತಿಂಗಳಲ್ಲಿ ಮೈತ್ರಿ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದ 17 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನ ಐಶಾರಾಮಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ್ದರು. ಇದಾದ ಬೆನ್ನಲ್ಲೇ ಅಂದಿನ ಸ್ಪೀಕರ್​ ರಮೇಶ್​ ಕುಮಾರ್​ ಸಿಪಿಎಲ್​ ನಾಯಕ ಸಿದ್ದರಾಮಯ್ಯ ಹಾಗೂ ಮೈತ್ರಿ ಸರ್ಕಾರದ ನಾಯಕ ಅಂದಿನ ಸಿಎಂ ಕುಮಾರಸ್ವಾಮಿ ದೂರಿನ ಮೇರೆಗೆ ವಿಚಾರಣೆ ನಡೆಸಿ ಎಲ್ಲಾ 17 ಶಾಸಕರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು.
ಹಿಂದಿನ ಸ್ಪೀಕರ್​​ ನಿರ್ಧಾರದ ವಿರುದ್ಧ 17 ಮಂದಿ ಅನರ್ಹ ಶಾಸಕರು ಸುಪ್ರೀಂಕೋರ್ಟ್​​ ಮೆಟ್ಟಿಲೇರಿದರು. ಬಳಿಕ ಸುಪ್ರೀಂಕೋರ್ಟ್​​ನಲ್ಲಿ ಜಯ ಸಿಗಬಹುದು ಎನ್ನುವ ಆಸೆ ಹೊತ್ತಿದ್ದ ಅನರ್ಹ ಶಾಸಕರಿಗೆ ಪ್ರತಿ ಬಾರಿಯೂ ಹಿನ್ನಡೆ ಆಗುತ್ತಲೇ ಇದೆ. ಸ್ಪೀಕರ್​ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿ ಒಂದು ತಿಂಗಳು ಕಳೆದರೂ ಪ್ರಕರಣ ವಿಚಾರಣೆಗೆ ಬಂದಿರಲ್ಲ. ಇದು ಅನರ್ಹರನ್ನು ಆತಂಕಕ್ಕೆ ಈಡು ಮಾಡಿತ್ತು. ಇದೀಗ ನಾಡಿದ್ದಾದರೂ ಸುಪ್ರಿಂನಲ್ಲಿ ತೀರ್ಪು ಬರುವ ನಿರೀಕ್ಷೆಯಲ್ಲಿ ಅನರ್ಹರಿದ್ದಾರೆ.

ಅನರ್ಹ ಶಾಸಕರ ಪ್ರಕರಣದ ವಿಚಾರಣೆಯನ್ನು ಜಸ್ಟೀಸ್​. ಮೋಹನ್ ಶಾಂತನಗೌಡರ ನಡೆಸಬೇಕಿತ್ತು. ಆದರೆ, ಅವರು ಕರ್ನಾಟಕ ಮೂಲದವರು ಮತ್ತು ಅನರ್ಹ ಶಾಸಕ ಬಿಸಿ ಪಾಟೀಲ್​ ಅವರ ದೂರದ ಸಂಬಂಧಿ. ಹೀಗಾಗಿ ಸ್ವಇಚ್ಛೆಯಿಂದ ಅವರು ವಿಚಾರಣೆಯಿಂದಲೇ ಹಿಂದೆ ಸರಿದಿದ್ದರು. ಹೀಗಾಗಿ ಈ ಪ್ರಕರಣವನ್ನು ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಕೃಷ್ಣ ಮುರಳಿ, ಸಂಜಯ್ ಖನ್ನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ವಿಚಾರಣೆ ನಡೆಸುತ್ತಿದೆ.

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ