
ಹೊಸದಿಲ್ಲಿ: ಸ್ಪೀಕರ್ ಅನರ್ಹತೆ ನಿರ್ಧಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರಕ್ಕೆ ಮುಂದೂಡಿದೆ.
ಇಂದು ನ್ಯಾ. ಎಸ್ ವಿ ರಮಣ ಅವರು ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡರು . ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಅವರು ಚುನಾವಣೆ ನೀತಿ ಸಂಹಿತೆಗೆ ಸಂಬಂಧಿಸಿದಂತೆ ಹೈಕೊರ್ಟ್ನಲ್ಲಿ ವಿಚಾರಣೆ ಬಾಕಿ ಇರುವುದನ್ನು ಪ್ರಸ್ತಾಪಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡುವಂತೆ ಒತ್ತಾಯಿಸಿದರು.
ಇದನ್ನು ಪುರಸ್ಕರಿಸಿದ ಸುಪ್ರಿಂ ಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿತು.