ಉಪಚುನಾವಣೆ ನಡೆಯಲಿರುವ ಹಿನ್ನೆಲೆ-ಪ್ರಚಾರ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಜ್ಜು

ಬೆಂಗಳೂರು,ಅ.22-  ರಾಜ್ಯದ 15 ಕ್ಷೇತ್ರಗಳಿಗೆ  ಉಪಚುನಾವಣೆ  ನಡೆಯಲಿರುವ ಹಿನ್ನೆಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಮೂಲಕ ಅನರ್ಹ ಶಾಸಕರ ಕ್ಷೇತ್ರಗಳಲ್ಲೂ ಪ್ರಚಾರ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಜ್ಜಾಗಿದ್ದಾರೆ.

ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮದ ಮೂಲಕ ಪ್ರಚಾರ ಆರಂಭಿಸುವ ಭಾಗವಾಗಿ ಅಕ್ಟೋಬರ್ 28ಕ್ಕೆ ಹೊಸಕೋಟೆಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಕೆರೆ ತುಂಬಿಸುವ ಯೋಜನೆಗೆ ಚಾಲನೆ ನೀಡಲಿರುವ ಸಿಎಂ ಯಡಿಯೂರಪ್ಪ, ಹೊಸಕೋಟೆಯ ಅನುಗೊಂಡನಹಳ್ಳಿ, ಜಡಿಗೇನಹಳ್ಳಿ ಹೋಬಳಿಯಲ್ಲಿ ಕೆರೆ ತುಂಬಿಸುವ 100 ಕೋಟಿ ವೆಚ್ಚದ ಯೋಜನೆಗೆ ಚಾಲನೆ ನೀಡಲಿದ್ದು, ಆ ಮೂಲಕ ಅಂದೇ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ.

ಅನರ್ಹ ಶಾಸಕ ಎಂಟಿಬಿ ನಾಗರಾಜ್ ಪ್ರತಿನಿಧಿಸುವ ಹೊಸಕೋಟೆಯಿಂದಲೇ ಪ್ರಚಾರ ಕಾರ್ಯ ಆರಂಭಿಸಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ.

ಅನರ್ಹರ ಕ್ಷೇತ್ರಗಳಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಪ್ರಚಾರ ಕೈಗೊಳ್ಳಲಿರುವ ಬಿಎಸ್‍ವೈ ಈ ಮೂಲಕ ಅನರ್ಹರ ಪರ ಮತಯಾಚನೆ ಮಾಡಲಿದ್ದಾರೆ.

ಒಟ್ಟಾರೆ ಸುಪ್ರೀಂಕೋರ್ಟ್ ತೀರ್ಪಿನ ಮೇಲೆ ಪ್ರಚಾರ ಕಾರ್ಯ ಆಯೋಜನೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿಗಳ ಆಪ್ತ ಮೂಲಗಳು ತಿಳಿಸಿವೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ