ಹುಬ್ಬಳ್ಳಿ, ಅ.22- ಬಿಜೆಪಿ ಇವಿಎಂ ಮೆಷಿನ್‍ಗಳು ಹಾಗೂ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬಿಜೆಪಿ ಇವಿಎಂಗಳ ದುರ್ಬಳಕೆಯನ್ನು ಕೇವಲ ಆಯ್ಕೆ ಮಾಡಲಾದ ಬೂತ್‍ಗಳಲ್ಲಿ ಮಾತ್ರ ಮಾಡುತ್ತವೆ. ಪ್ರಪಂಚದಲ್ಲಿ ಅನೇಕ ರಾಷ್ಟ್ರಗಳು ಬ್ಯಾಲೆಟ್ ಪೇಪರ್‍ಗಳ ಬಳಕೆ ಮಾಡುತ್ತಿದ್ದು, ಭಾರತದಲ್ಲಿ ಮಾತ್ರ ಬ್ಯಾಲೆಟ್ ಪೇಪರ್ ಇಲ್ಲದೆ ಇವಿಎಂ ಮೆಷಿನ್ ಬಳಕೆ ಮಾಡಲಾಗುತ್ತಿದೆ ಎಂದರು.
ಮಹಾರಾಷ್ಟ್ರ, ಹರಿಯಾಣ ಚುನಾವಣೆಗೆ ಸಂಬಂಧಿಸಿದಂತೆ ಎಕ್ಸಿಟ್ ಪೆÇೀಲ್ ಗಳು ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿವೆ. ಚುನಾವಣಾ ಫಲಿತಾಂಶ ಬಂದ ಮೇಲೆ ನೋಡೋಣ.ಜನರು ಯಾವ ತೀರ್ಪು ಕೊಡುತ್ತಾರೆ ಅದನ್ನು ಒಪ್ಪಿಕೊಳ್ಳಲೇಬೇಕು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಮತ್ತೆ ನೆರೆ ಪ್ರವಾಹ ಬಂದಿದ್ದು, ಈವರೆಗೆ ನೆರೆ ಪರಿಹಾರ ಸಿಕ್ಕಿಲ್ಲ. ಜನರು ಮತ್ತೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ರೀತಿ ಇರುವಾಗ ಬಿಜೆಪಿ ಸರ್ಕಾರ ಏನೂ ಮಾಡುತ್ತಿಲ್ಲ. ಈ ಬಗ್ಗೆ ಕಾಂಗ್ರೆಸ್‍ನಿಂದ ಬೆಳಗಾವಿ, ಬೆಂಗಳೂರು ಸೇರಿದಂತೆ ಎಲ್ಲ ಕಡೆಗೆ ಸಾಕಷ್ಟು ಹೋರಾಟ ಮಾಡಲಾಗಿದೆ.ಆದರೆ, ರಾಜ್ಯ ಸರ್ಕಾರ ಮಾತ್ರ ಎಚ್ಚರಗೊಳ್ಳಲಿಲ್ಲ. ಮಲಗಿರೋರನ್ನು ಎಬ್ಬಿಸಬಹುದು.ಆದರೆ ಮಲಗಿರೋರ ಹಾಗೇ ನಾಟಕ ಮಾಡುವವರನ್ನು ಎಬ್ಬಿಸೋಕೆ ಆಗಲ್ಲ ಎಂದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸಭೆಯಲ್ಲಿ ನೆರೆ ಪರಿಹಾರ ಕೊಡುತ್ತೇನೆ ಎಂದು ಹೇಳಿದರು.ಆದರೆ, ಪರಿಹಾರಕ್ಕೆ ಈವರೆಗೆ ಕಾಯುತ್ತಿದ್ದೇವೆ. ಆ ಬಗ್ಗೆ ನಾಳೆನೂ ಹೋರಾಟ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಸಾವರ್ಕರ್ ಬಗ್ಗೆ ಈಗಾಗಲೇ ಹೇಳಿಕೆ ನೀಡಿದ್ದು, ಅದಕ್ಕೆ ನಾನು ಬದ್ದವಾಗಿದ್ದೇನೆ. ಮಹತ್ಮಾ ಗಾಂಧೀಜಿಯವರ ಕೊಲೆಯಲ್ಲಿ ಅವರು ಕೂಡಾ ಒಬ್ಬ ಆರೋಪಿಯಾಗಿದ್ದಾರೆ.ಸರಿಯಾದ ಸಾಕ್ಷಿಗಳ ಕೊರತೆಯಿಂದಾಗಿ ಅವರು ಹೊರಬಂದಿರಬಹುದು. ಹಾಗಂತ ಅವರು ಆರೋಪಿಯೇ ಅಲ್ಲವೆಂದು ಹೇಳಲು ಸಾಧ್ಯವಿಲ್ಲ ಎಂದರು.
ಸಾವರ್ಕರ್ ಹಿಂದುತ್ವದ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡಿದ್ದಾರೆ.ಆ ನಿಟ್ಟಿನಲ್ಲಿ ಅವರಿಗೆ ಪ್ರಶಸ್ತಿ ಕೊಡುವ ಬದಲು ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ನೀಡಿ ಅಂತ ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.