ತಿಹಾರ್ ಜೈಲಿಗೆ ಸೋನಿಯಾ, ಅಂಬಿಕಾ ಸೋನಿ ಭೇಟಿ; ಡಿಕೆ ಶಿವಕುಮಾರ್ ಜತೆ ಚರ್ಚೆ

ನವದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರನ್ನು ಬುಧವಾರ ಬೆಳಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕಿ ಅಂಬಿಕಾ ಸೋನಿ ಭೇಟಿಯಾಗಿ ಕುಶಲೋಪರಿ ನಡೆಸಿದರು.

ತಿಹಾರ್ ಜೈಲಿಗೆ ಭೇಟಿ ನೀಡಿದ ವೇಳೆ ಸಂಸದ, ಡಿಕೆ ಸಹೋದರ ಡಿಕೆ ಸುರೇಶ್ ಕೂಡಾ ಜತೆಗಿದ್ದರು ಎಂದು ವರದಿ ತಿಳಿಸಿದೆ.

ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಕುರಿತ ತೀರ್ಪನ್ನು ದೆಹಲಿ ಹೈಕೋರ್ಟ್ ಇಂದು ನೀಡಲಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೆಪ್ಟಂಬರ್ ನಲ್ಲಿ ಡಿಕೆಶಿಯನ್ನು ಬಂಧಿಸಿತ್ತು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ