ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿ ತಿಹಾರ್ ಜೈಲಿನಲ್ಲಿರುವ ಮಾಜಿ ಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಭೇಟಿಯಾಗಿದ್ದಾರೆ.
ಅನಾರೋಗ್ಯದಿಂದ ಬಳಲಿದ್ದ ಕಾರಣ ಸೋನಿಯಾ ಗಾಂಧಿ ಭೇಟಿಯಾಗಿರಲಿಲ್ಲ. ಇದೀಗ ಸೋನಿಯಾ ಗಾಂಧಿ ಅವರು ತಿಹಾರ್ ಜೈಲಿನಲ್ಲಿ ಡಿಕೆಶಿ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮೊನ್ನೆಯಷ್ಟೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕೂಡ ಡಿಕೆಶಿಯನ್ನ ಭೇಟಿ ಮಾಡಿದ್ದರು.