ಮಹಾರಾಷ್ಟ್ರ: ದೇವೇಂದ್ರಗೆ ಒಲಿದ ಮತದಾರ, ಭಾರೀ ಮುನ್ನಡೆಯತ್ತ ಎನ್‌ಡಿಎ

ಮಹಾರಾಷ್ಟ್ರ: ಮಹಾರಾಷ್ಟ್ರ ಚುನಾವಣಾ ಫಲಿತಾಂಶದಲ್ಲಿ ಎನ್‌ಡಿಎ ಮೈತ್ರಿಕೂಟ ಮುನ್ನಡೆಯತ್ತ ಸಾಗುತ್ತಿದೆ. ಚುನಾವಣೋತ್ತರ ಸಮೀಕ್ಷೆಗಳು ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗುತ್ತದೆ ಎಂದು ಭವಿಷ್ಯ ನುಡಿದಿದ್ದವು. ಸದ್ಯದ ಫಲಿತಾಂಶದಲ್ಲಿ ಬಿಜೆಪಿ ಭಾರೀ ಮುನ್ನಡೆಯತ್ತ ಸಾಗುತ್ತಿರುವುದು ಸಮೀಕ್ಷೆಗಳ ಭವಿಷ್ಯ ನಿಜವಾಗುವ ಲಕ್ಷಣಗಳು ಗೋಚರಿಸುತ್ತಿವೆ.

ಮಹಾರಾಷ್ಟ್ರದ ಸಿಎಂ ದೇವೇಂದ್ರ ಫಡ್ನವಿಸ್ ನಾಗಪುರ ನೈಋತ್ಯದಲ್ಲಿ ಮುನ್ನಡೆಯತ್ತ ಸಾಗುತ್ತಿದ್ದಾರೆ. ಮುಂದಿನ ಸಿಎಂ ಎಂದು ಬಿಂಬಿಸಲ್ಪಡುತ್ತಿರುವ ಶಿವಸೇನೆಯ ಆದಿತ್ಯ ಠಾಕ್ರೆ ವರ್ಲಿ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುತ್ತಿದ್ದಾರೆ. ಭೋಕರ್‌ನಲ್ಲಿ ಅಶೋಕ್ ಚೌಹ್ಹಾನ್ ಮುನ್ನಡೆ ಸಾಧಿಸುತ್ತಿದ್ದರೆ, ಕೋತ್ರಾದ್‌ನಲ್ಲಿ ಚಂದ್ರಕಾಂತ್ ಪಾಟೀಲ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಪರ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಂಕಜಾ ಮುಂಡೆ ಹಿನ್ನಡೆಯನ್ನು ಅನುಭವಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ