ಡಿಕೆಶಿ ಮನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಪರಂ ಭೇಟಿ

ಬೆಂಗಳೂರು: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಉಪಮುಖ್ಯಮಂತ್ರಿ ಪರವಮೇಶ್ವರ್ ಭೇಟಿಯಾಗಿದ್ದಾರೆ.
ಅಕ್ರಮ ಹಣ ಗಳಿಕೆ ಆರೋಪದ ಮೇಲೆ ಬಂಧಿತರಾಗಿ 50 ದಿನಗಳ ಕಾಲ ತಿಹಾರ್ ಜೈಲಿನಲ್ಲಿದ್ದು ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ರು. ನಿನ್ನೆ ಸಾವಿರಾರು ಅಭಿಮಾನಿಗಳ ಉಪಸ್ಥಿತಿಯಲ್ಲಿ ಬೆಂಗಳೂರಿಗೆ ಆಗಮಿಸಿದ್ದರು.
ಇಂದು ಡಿಕೆಶಿಯನ್ನ ಭೇಟಿಯಾದ ಪರಂ ಅಪ್ಪಿಕೊಂಡು ಭಾವುಕರಾದರು. ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಭೇಟಿ ಕೊಟ್ಟು ಮಾತುಕತೆ ನಡೆಸಿದ್ದರು. 58 ದಿನಗಳ ನಂತರ ಡಿಕೆಶಿ ಮತ್ತು ಪರಂ ಮುಖಾಮುಖಿಯಾಗಿದ್ದಾರೆ.ಡಿಕೆಶಿಯನ್ನ ನೋಡಲು ಅಭಿಮಾನಿಗಳು, ಬೆಂಬಲಿಗರು ಬೆಂಗಳೂರಿನಲ್ಲಿರುವ ಸದಾಶಿವನಗರಲ್ಲಿ ಮನೆಗೆ ಭೇಟಿಕೊಟ್ಟಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ