ಬೈಕ್ಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನ-ಅಪಘಾತದಲ್ಲಿ ಒಬ್ಬನ ಸಾವು

ಬೆಂಗಳೂರು, ಅ.28-  ಅತಿವೇಗವಾಗಿ ಮುನ್ನುಗ್ಗಿ ಬಂದ ವಾಹನ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಕೆಂಗೇರಿ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ವಸಂತಪುರದ ನಿವಾಸಿ ಶಿವರಾಜ್ (19) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ 10.15ರ ಸುಮಾರಿನಲ್ಲಿ ಶಿವರಾಜ್ ನೈಸ್ ರಸ್ತೆಯ ವೃಷಭಾವತಿ ಬ್ರಿಡ್ಜ್ ಮೇಲೆ ಬೈಕ್‍ನಲ್ಲಿ ಹೋಗುತ್ತಿದ್ದಾಗ ಅತಿವೇಗವಾಗಿ ಬಂದ ಯಾವುದೋ ವಾಹನ ಬೈಕ್‍ಗೆ ಡಿಕ್ಕಿ ಹೊಡೆದಿದ್ದು, ವಾಹನ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ.

ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಶಿವರಾಜ್‍ನನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಸುದ್ದಿ ತಿಳಿದ ಕೆಂಗೇರಿ ಸಂಚಾರಿ ಠಾಣೆ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತ ದೇಹವನ್ನು ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ.

ಅಪಘಾತವೆಸಗಿ ಪರಾರಿಯಾಗಿರುವ ವಾಹನ ಹಾಗೂ ಅದರ ಚಾಲಕನಿಗಾಗಿ ತನಿಖೆ ಮುಂದುವರೆದಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ