ಸುಳ್ಳಿನ ಕತ್ತಲನ್ನು ಸತ್ಯದ ಬೆಳಕು ಅಳಿಸಿ ಹಾಕುತ್ತದೆ-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು,ಅ.28-ತಮ್ಮ ಮನೆಯಲ್ಲಿ ನಡೆದ ಖಾಸಗಿ ಮಾತುಕತೆಯ ವಿಡಿಯೋವನ್ನು ತಪ್ಪು ವ್ಯಾಖ್ಯಾನ ಮಾಡಿ ಅಪಪ್ರಚಾರ ಮಾಡಲಾಗುತ್ತಿದೆ.  ಸುಳ್ಳಿನ ಕತ್ತಲನ್ನು ಸತ್ಯದ ಬೆಳಕು ಅಳಿಸಿ ಹಾಕುತ್ತದೆ.ನನ್ನ ರಾಜಕೀಯ ವಿರೋಧಿಗಳಿಗೆ ದೀಪಾವಳಿಗೆ ನನ್ನ ಸಂದೇಶವಿದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಟ್ವೀಟ್ ಮೂಲಕವೇ ಸಂದೇಶ ರವಾನಿಸಿದ್ದಾರೆ.

ಬಿಜೆಪಿಯ ಕರ್ನಾಟಕ ನಾಯಕರು ಈ ರೀತಿ ಅಪಪ್ರಚಾರ ಮಾಡುತ್ತಾ ವಿಕೃತ  ಆನಂದ ಪಡುತ್ತಿದ್ದಾರೆ. ಇದು ನನಗೆ ಹೊಸತ್ತಲ್ಲ. ಇಂತಹ ಸುಳ್ಳಿನ ಕತ್ತಲನ್ನು ಸತ್ಯದ ಬೆಳಕು ಅಳಿಸುತ್ತದೆ.ನನ್ನ ರಾಜಕೀಯ ವಿರೋಧಿಗಳಿಗೆ ಇದೇ ಸಂದೇಶ ಎಂದು ಬರೆದುಕೊಂಡಿದ್ದಾರೆ.

ರಾಜಕೀಯ ಪಕ್ಷಗಳು ನೈತಿಕವಾಗಿ ದಿವಾಳಿಯಾದಾಗ ಇಂತಹ ಅಪಸವ್ಯಗಳು ಹುಟ್ಟಿಕೊಳ್ಳುತ್ತವೆ. ವೈಯಕ್ತಿಕ ದಾಳಿಗಳು ನನ್ನ ಬದ್ದತೆಯನ್ನು ಇನ್ನಷ್ಟು ಗಟ್ಟಿಗೊಳಿಸುತ್ತವೆ ಹಾಗೂ ಜನರಿಗಾಗಿ  ಹೋರಾಡುವ ಹುಮ್ಮಸ್ಸನ್ನು ಇಮ್ಮಡಿಗೊಳಿಸುತ್ತದೆ. ಇದಕ್ಕಾಗಿ ನನ್ನ ರಾಜಕೀಯ ವಿರೋಧಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.

ನಾನು ಜಾತಿವಾದಿ ಅಲ್ಲ. ಸಾಮಾಜಿಕ ನ್ಯಾಯಕ್ಕೆ ಬದ್ಧನಾಗಿರುವ ನಾನು ಅಂಬೇಡ್ಕರ್, ಗಾಂಧೀಜಿ, ಬಸವಣ್ಣ ಮತ್ತು ಕುವೆಂಪು ಅವರ ಚಿಂತನೆಯಿಂದ ಪ್ರೇರಿತನಾಗಿ ಜಾತ್ಯಾತೀತ ಹಾಗೂ ಅವರ ಚಿಂತನೆಗಳ ಫಲವೇ ನನ್ನ ಸರ್ಕಾರದ ಯೋಜನೆಗಳಾಗಿದ್ದವು.ಇದು ನನ್ನ ಜಾತಿ ವಿನಾಶದ ಹಾದಿ.ನಿಮ್ಮದು ಯಾವ ಹಾದಿ ಎಂದು ಪ್ರಶ್ನಿಸಿದ್ದಾರೆ.

ನಾನು ಜಾತಿ ರಾಜಕೀಯ ಮಾಡುತ್ತಿದ್ದೇನೆ ಎಂದು ಆರೋಪಿಸುವವರು ಅವರ ಪಕ್ಷಗಳ ನೀತಿ ಮತ್ತು ಕಾರ್ಯಗಳಲ್ಲಿ  ಗಾಂಧಿ, ಅಂಬೇಡ್ಕರ್ ಬಸವಣ್ಣನವರ ವಿಚಾರಧಾರೆಗಳೆಷ್ಟು ಇವೆ ಎಂಬುದನ್ನು ಬಹಿರಂಗಪಡಿಸಲಿ. ಚರ್ಚೆಗೆ ನಾನು ಸಿದ್ದ ಎಂದು ಸವಾಲು ಹಾಕಿದ್ದಾರೆ.

ಇಂದು ರಾಜ್ಯದ ಮತದಾರರು ಜಾತಿ ಬಿಟ್ಟು ಯೋಜನೆ ಮಾಡುತ್ತಿದ್ದಾರೆ. ಲಿಂಗಾಯಿತರು ಯಡಿಯೂರಪ್ಪನವರಿಂದ, ಒಕ್ಕಲಿಗರು ಜೆಡಿಎಸ್‍ನಿಂದ ದೂರವಾಗುತ್ತಿದ್ದಾರೆ ಎಂಬ ಗೆಳಯರ ಮಾತಿಗೆ ನಾನು ಸಹಮತ ಸೂಚಿಸಿದ್ದು ನಿಜ. ಜನ ಜಾತ್ಯಾತೀತರಾಗುತ್ತಿದ್ದಾರೆ ಎಂದು ಹೇಳಿದ್ದರಲ್ಲಿ ತಪ್ಪೇನಿದೆ ಎಂದು ಕೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ