ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಣೆಗೆ ಆದ್ಯತೆ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಅ.31- ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಣೆಗೆ ಆದ್ಯತೆ ನೀಡುವುದು ಸರ್ಕಾರದ ಜವಾಬ್ದಾರಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮತ್ತು ಸತ್ಯಸಾಯಿ ಆರೋಗ್ಯ ಮತ್ತು ಶಿಕ್ಷಣ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಅಪೌಷ್ಠಿಕತೆ ನಿವಾರಣೆ ಆಂದೋಲನಕ್ಕೆ ಚಾಲನೆ ನೀಡಿ ಸಿಎಂ ಮಾತನಾಡಿದರು.

ಮಕ್ಕಳಲ್ಲಿನ ಅಪೌಷ್ಠಿಕತೆ ನಿರ್ಮೂಲನೆಗೆ ಸಂಬಂಧಿಸಿದಂತೆ ಸರ್ಕಾರ ಹಾಗೂ ಸರ್ಕಾರೇತರ ಸಂಘ-ಸಂಸ್ಥೆಗಳು ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಬೇಕು.ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದರು.

ತಾಯಿಸೂರು ಎಂಬ ಹೆಸರಿನ ಆಹಾರವನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದ್ದು, ಇದು ಅತ್ಯಂತ ಉತ್ತಮ ಕೆಲಸ. ಇಂತಹ ಕಾರ್ಯಗಳಿಗೆ ಸರ್ಕಾರ ಪೆÇ್ರೀ ನೀಡಲಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ತಾಯಿಸೂರು ಆಹಾರ  ವಿತರಣೆ ಮತ್ತು ಮೊಬೈಲ್ ಆ್ಯಪನ್ನು ಬಿಡುಗಡೆ ಮಾಡಲಾಯಿತು.

ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ 10 ಲಕ್ಷ  ಮಕ್ಕಳಿಗೆ, 40 ಸಾವಿರ ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ನೀಡಲಾಗಿದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ, ಮಹಿಳಾ ಮತ್ತು ಮಕ್ಕಳ ಸಚಿವೆ ಶಶಿಕಲಾಜೊಲ್ಲೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್, ಮಾಜಿ ಸಚಿವರಾದ ಬಸವರಾಜ ಹೊರಟ್ಟಿ, ಟಿ.ಬಿ.ಜಯಚಂದ್ರ, ಕ್ರಿಕೆಟ್‍ಪಟು ಜಿ.ಆರ್.ವಿಶ್ವನಾಥ್, ಸತ್ಯಸಾಯಿ ವಿವಿ ಕುಲಪತಿ ಬಿ.ಎನ್.ನರಸಿಂಹಮೂರ್ತಿ ಮತ್ತಿತರರು ಪಾಲ್ಗೊಂಡಿದ್ದರು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ