
ಬೆಂಗಳೂರು, ಅ.31- ಶಾಲಾ ಪಠ್ಯಪುಸ್ತಕದಲ್ಲಿ ಟಿಪ್ಪು ಸುಲ್ತಾನ್ ವಿಷಯವನ್ನು ಕೈಬಿಡುವ ಬಗ್ಗೆ ಸಭೆಯ ನಂತರ ತೀರ್ಮಾನ ತೆಗೆದುಕೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಪಠ್ಯ ಪುಸ್ತಕದಲ್ಲಿ ಟಿಪ್ಪು ಸುಲ್ತಾನ್ ವಿಷಯವನ್ನು ಕೈಬಿಡುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಪರಿಶೀಲನೆಗೆ ಪಠ್ಯಪುಸ್ತಕ ಪರಿಶೀಲನಾ ಸಮಿತಿಗೆ ಸೂಚಿಸಲಾಗಿದೆ.ನವೆಂಬರ್ 7ರಂದು ಸಮಿತಿ ಸಭೆ ನಡೆಯಲಿದೆ.ಆನಂತರ ಈ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಕೊಡಗಿನ ಶಾಸಕರು ಈ ವಿಷಯವಾಗಿ ದೂರು ನೀಡಿದ್ದರು. ಹಾಗಾಗಿ ಪಠ್ಯದಿಂದ ಟಿಪ್ಪು ಸುಲ್ತಾನ್ ವಿಷಯ ಕೈಬಿಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಸ್ಪಷ್ಟಪಡಿಸಿದರು.