ಬೆಂಗಳೂರು, ನ.1- ಕರ್ನಾಟಕ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘಟನೆಗಳ ಒಕ್ಕೂಟ, ಹಾವೇರಿ ಜಿಲ್ಲಾ ಉಪನ್ಯಾಸಕರು ಹಾಗೂ ಪ್ರಾಂಶುಪಾಲರ ಸಂಘದ ವತಿಯಿಂದ ನವೆಂಬರ್ ಏಳರಂದು ಹಾವೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಹಾವೇರಿಯ ದಾನೇಶ್ವರಿ ನಗರದಲ್ಲಿರುವ ಪದವಿ ಪೂರ್ವ ನೌಕರರ ಭವನದಲ್ಲಿ ನ.7ರಂದು ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿಗಳಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಒಕ್ಕೂಟದ ರಾಜ್ಯಾಧ್ಯಕ್ಷ ಎಂ.ಪಿ. ಕರಬಸಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮಾರಂಭದ ಸಂದರ್ಭದಲ್ಲಿ ಉಪನ್ಯಾಸಕರ ಕಾಲ್ಪನಿಕ ಹಾಗೂ ಇತರೆ ಸಮಸ್ಯೆಗಳ ಕುರಿತ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು.ಈಗಾಗಲೇ ಒಕ್ಕೂಟದ ವತಿಯಿಂದ ವಿಧಾನ ಪರಿಷತ್ ಸದಸ್ಯರು, ಶಿಕ್ಷಣ ಸಚಿವರು, ಮಠಾಧೀಶರನ್ನು ಭೇಟಿ ಮಾಡಿ ವಿಷಯ ತಿಳಿಸಿ ಮನವಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.