ಕಾಶ್ಮೀರದಲ್ಲಿ ಮತ್ತೆ ಚಿಗುರಿದೆ ಉಗ್ರ ಜಾಲ: ಲಷ್ಕರೆ ಉಗ್ರನನ್ನು ವಶಕ್ಕೆ ಪಡೆದ ಸೇನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಶನಿವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಲಷ್ಕರೆ ಉಗ್ರನೊಬ್ಬ ಸಿಕ್ಕಿಬಿದ್ದಿದ್ದಾನೆ. ಇಲ್ಲಿನ ಸಪೋರೆ ಎಂಬ ಪ್ರದೇಶದಲ್ಲಿ ಸೇನೆ ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಲಷ್ಕರ್ ಇ ತೋಯ್ಬಾ ಉಗ್ರ ಸಂಘಟನೆಗೆ ಸೇರಿದ ಒಬ್ಬ ಉಗ್ರನನ್ನು ಬಂಧಿಸಲಾಗಿದೆ.
ಇತ್ತೀಚೆಗಷ್ಟೇ ಯುರೋಪ್‌ ಸಂಸದರ ನಿಯೋಗ ಕಾಶ್ಮೀರಕ್ಕೆ ಭೇಟಿ ನೀಡಿರುವ ಸಂದರ್ಭದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದರು. 6 ಮಂದಿಯನ್ನು ಹತ್ಯೆಗೆ ಕಾರಣರಾಗಿದ್ದರು. ಜಮ್ಮು-ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿ ಕಾರ್ಮಿಕರನ್ನು ಗುಂಡಿಕ್ಕಿ ಕೊಂದಿದ್ದರು.
ಕಾಶ್ಮೀರದಲ್ಲಿ ನಿರ್ಬಂಧಗಳು ಸಡಿಲಗೊಳ್ಳುತ್ತಿರುವ ಬೆನ್ನಲ್ಲೇ ಉಗ್ರರ ದಾಳಿ ಪ್ರಕರಣಗಳು ಹೆಚ್ಚುತ್ತಿವೆ. ಉಗ್ರರು ಹೆಚ್ಚಾಗಿ ಕಾಶ್ಮೀರೇತರರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿದ್ದಾರೆ. ಅಂದರೆ ಪಂಜಾಬ್‌, ಹರಿಯಾಣ, ರಾಜಸ್ಥಾನಗಳಿಂದ ವ್ಯಾಪಾರಕ್ಕಾಗಿ ಬರುವ ಲಾರಿ ಡ್ರೈವರ್ಗಳ ಮೇಲೆ ಉಗ್ರರು ದಾಳಿ ನಡೆಸುತ್ತಿದ್ದಾರೆ.
ಇದೀಗ ಮತ್ತೆ ಲಷ್ಕರೆ ಉಗ್ರ ಸಿಕ್ಕಿಬಿದ್ದಿದ್ದು, ಕಾಶ್ಮೀರದಲ್ಲಿ ಮತ್ತೆ ಉಗ್ರ ಚಟುವಟಿಕೆ ಚಿಗುರೊಡೆದಿರುವುದಕ್ಕೆ ಸಾಕ್ಷಿಯಾಗಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ