ಜಮ್ಮು-ಕಾಶ್ಮೀರ ಗಡಿಯಲ್ಲಿ ಮತ್ತೆ ಪಾಕ್ ಪಡೆಯಿಂದ ದಾಳಿ, ಭಾರತೀಯ ಸೇನೆ ಪ್ರತಿದಾಳಿ

ನವದೆಹಲಿ: ಒಂದೆಡೆ ಪಾಕಿಸ್ತಾನದಲ್ಲಿ ಪ್ರಧಾನಿ ಇಮ್ರಾನ್ ಖಾನ್ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಮೌಲ್ವಿ ಫಝ್ಲುರ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದರೆ, ಮತ್ತೊಂದೆಡೆ ಪಾಕಿಸ್ತಾನ ಸೇನಾಪಡೆಗಳು ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿವೆ.

ವರದಿಯ ಪ್ರಕಾರ, ಶನಿವಾರ ಬೆಳಗ್ಗೆ ಪೂಂಚ್ ಜಿಲ್ಲೆಯ ಗಡಿಯಲ್ಲಿ ಪಾಕಿಸ್ತಾನ ಪಡೆಗಳು ಕದನ ವಿರಾಮ ಉಲ್ಲಂಘಿಸಿ ಭಾರತೀಯ ಸೇನಾ ಪೋಸ್ಟ್ ಗಳನ್ನು ಗುರಿಯಾಗಿರಿಸಿ ದಾಳಿ ನಡೆಸಿದ್ದು, ಇದಕ್ಕೆ ಭಾರತೀಯ ಸೇನಾಪಡೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ವರದಿ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ